spot_img
Tuesday, March 17, 2026
spot_img

ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರ ಕ್ರಮ : 14 ವರ್ಷದ ಎಲ್ಲಾ ಬಾಲಕಿಯರಿಗೆ ಉಚಿತ ಲಸಿಕೆ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, 14 ವರ್ಷದ ಎಲ್ಲಾ ಬಾಲಕಿಯರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದೆ.

ಆರ್ಟಿಸ್ಟ್ ಫಾರ್ ಹರ್ ಸಂಸ್ಥೆಯು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಕರ್ನಾಟಕದಲ್ಲಿ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನಾ ಅಭಿಯಾನ’ಕ್ಕೆ ಚಾಲನೆ ನೀಡಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿದರು.

ಮಹಿಳೆಯರಲ್ಲಿ ಹೆಚ್ಚಾಗಿ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್‌ ಪತ್ತೆಯಾಗುತ್ತಿದೆ. ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಎಚ್‌ಪಿವಿ ಲಸಿಕೆ ಸಹಕಾರಿ. ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಈ ಲಸಿಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಕಾರ್ಯಗತವಾಗುವ ವಿಶ್ವಾಸವಿದೆ. ನವದೆಹಲಿ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯದಲ್ಲಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿಯೂ ಈ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.

ಹದಿಹರೆಯದ ಹೆಣ್ಣು ಮಕ್ಕಳಿಗೆ ಎಚ್‍ಪಿವಿ ಲಸಿಕೆ ಹಾಕುವುದರಿಂದ ಭವಿಷ್ಯದಲ್ಲಿ ಅವರಿಗೆ ಎದುರಾಗಬಹುದಾದ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಸ್ತಾವವು ಸರಕಾರದ ಮುಂದಿದ್ದು, ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗಾಗಿ ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿರುವ 90-70-90 ಸೂತ್ರಕ್ಕೆ (14 ವರ್ಷದೊಳಗಿನ ಶೇ.90ರಷ್ಟು ಹೆಣ್ಣು ಮಕ್ಕಳಿಗೆ ಲಸಿಕೆ, 25 ವರ್ಷದ ನಂತರ ಶೇ.70ರಷ್ಟು ಮಹಿಳೆಯರ ಸ್ಕ್ರೀನಿಂಗ್, ಬಾಧಿತರ ಪೈಕಿ ಶೇ.90ರಷ್ಟು ಮಹಿಳೆಯರಿಗೆ ಚಿಕಿತ್ಸೆ ಲಭ್ಯತೆ) ಅನುಗುಣವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದರ ಪ್ರಾಯೋಗಿಕ ಅನುಷ್ಠಾನ ನಡೆಯಲಿದೆ. ಈ ವಿಷಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಬೇಕು ಎಂಬುದು ಸರಕಾರದ ಆಶಯವಾಗಿದೆ.

ಪ್ರಸಕ್ತ ವರ್ಷದ ಬಜೆಟ್‍ನಲ್ಲಿ ಕಲ್ಯಾಣ ಕರ್ನಾಟಕದ 5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಲಸಿಕೆ ಹಾಕುವ ಕಾರ್ಯಕ್ರಮ ಪ್ರಕಟಿಸಿ ಹಣ ತೆಗೆದಿಡಲಾಗಿದೆ. ಈ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಈ ವರ್ಷದ 14 ವರ್ಷ ಪೂರೈಸುವ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಮುಂಬರುವ ದಿನಗಳಲ್ಲಿ ಈ ಲಸಿಕೆಯ ಬೆಲೆ ತಗ್ಗುವ ಸಾಧ್ಯತೆ ಇದ್ದು, ಎಲ್ಲಾ ಹೆಣ್ಣು ಮಕ್ಕಳಿಗೂ ಇದು ಲಭ್ಯವಾಗಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!