spot_img
Tuesday, March 17, 2026
spot_img

ಲಯನ್ಸ್ ಕ್ಲಬ್ ಸಾಮಾಜಿಕ ಸೇವಾ ಕಾರ್ಯಗಳು ಪ್ರಶಂಸನೀಯ-ಮೊಹಮ್ಮದ್ ಹನೀಫ್

ಗೋಳಿಯಂಗಡಿ: ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳೊಂದಿಗೆ ಶ್ರೇಷ್ಠ ಸ್ಥಾನಮಾನಗಳೊಂದಿಗೆ ಗುರುತಿಸಿಕೊಂಡಿರುವುದು ಪ್ರಶಂಸನೀಯ, ಸಾಮಾಜಿಕ ಹಿತ ಚಿಂತನೆಗಳೊಂದಿಗೆ ಸೇವೆಗೆ ಹೆಚ್ಚಿನ ಆಧ್ಯತೆ ನೀಡಿದಾಗ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಲಯನ್ ಜಿಲ್ಲಾ ಗೌವರ್ನರ್ ಮೊಹಮ್ಮದ್ ಹನೀಫ್ ಹೇಳಿದರು.

ಅವರು ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್‌ಗೆ ಇತ್ತೀಚೆಗೆ ಭೇಟಿ ನೀಡಿ ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್ ಜಯರಾಮ ಶೆಟ್ಟಿ ಸುರ್‍ಗೋಳಿ ಅಧ್ಯಕ್ಷತೆ ವಹಿಸಿದರು.

ಲಯನ್ಸ್ ಜಿಲ್ಲಾ ಉಪ ಗೌವರ್ನರ್ ಸ್ವಪ್ನಾ ಸುರೇಶ್, ಜಿಲ್ಲಾ ಕೋಶಾಧಿಕಾರಿ ಶ್ರೀನಿವಾಸ ಪೈ, ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ಕಾರ್ಯದರ್ಶಿ ಅನಂದ ಶೆಟ್ಟಿ, ವಲಯಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಕಾರ್ಯದರ್ಶಿ ವೈ ಪಟ್ಟಾಭೀರಾಮ್ ಭಟ್ ಮರೂರು, ವಿಸ್ತಾರಣಾಧಿಕಾರಿ ಸುದರ್ಶನ ನಾಯಕ್, ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ ಕಮ್ಗೋಳಿ, ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಮಾಜಿ ಅಧ್ಯಕ್ಷ ಬಿ.ಸತೀಶ ಕಿಣಿ ಬೆಳ್ವೆ, ಮಾಜಿ ಉಪಾಧ್ಯಕ್ಷ ಬಾಬು ಶೆಟ್ಟಿ ಜಗ್ಲುಗುಡ್ಡೆ ಹಾಗೂ ಇನ್ನೀತರರು ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಸೇವಾ ಕಾರ್ಯಕ್ರಮದ ಅಂಗವಾಗಿ ಬೆಳ್ವೆ ಎಮ್‌ಎಲ್‌ಆರ್ ಸ್ವಚ್ಚತಾ ಘಟಕದ ಸಿಬಂದಿಗಳನ್ನು ಸನ್ಮಾನಿಸಲಾಯಿತು.
ಶಶಿಕಲಾ ಅಲ್ಸೆ ಸೆಟ್ಟೋಳಿ, ಭಾರ್ಗವಿ ಭಟ್ ಗೋಳಿಯಂಗಡಿ ಪ್ರಾರ್ಥಿಸಿದರು. ಚಂದ್ರಿಕಾ ಧ್ವಜ ವಂದನೆ ನೆರವೇರಿಸಿದರು. ತೀರ್ಥಕಲಾ ನೀತಿ ಸಂಹಿತೆ ಭೋಧಿಸಿದರು. ವಿಶ್ವಶಾಂತಿಗಾಗಿ ಪ್ರಾರ್ಥಿಸಲಾಯಿತು.

ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್ ಜಯರಾಮ ಶೆಟ್ಟಿ ಸುರ್‍ಗೋಳಿ ಸ್ವಾಗತಿಸಿದರು. ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ ಕಮ್ಗೋಳಿ ವರದಿ ವಾಚಿಸಿದರು. ಬಿ.ವಿನೋದ ಕಿಣಿ ಬೆಳ್ವೆ ಪರಿಚಯಿಸಿದರು. ಕೀರ್ತಿಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಕ್ಲಬ್ ವಲಯ ಕಾರ್ಯದರ್ಶಿ ವೈ ಪಟ್ಟಾಭೀರಾಮ್ ಭಟ್ ಮರೂರು ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!