spot_img
Monday, March 16, 2026
spot_img

ಹಾಲಿನ ದರ ಏರಿಕೆಯ ಬೆನ್ನಲ್ಲೇ ವಿದ್ಯುತ್ ದರ ಏರಿಕೆ | ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ !

ಜನಪ್ರತಿನಿಧಿ (ಬೆಂಗಳೂರು) : ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಒಂದೇ ದಿನ ಎರಡೇರಡು ಶಾಕ್ ನೀಡಿದ್ದು, ಇಂದು(ಗುರುವಾರ) ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಿದ್ಯುತ್‌ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (KERC) ಆದೇಶ ಹೊರಡಿಸಿದೆ.

ಕೆಇಆರ್‌ಸಿ ಹೊರಡಿಸಿರುವ ಆದೇಶದ ಪ್ರಕಾರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಈ ವಿದ್ಯುತ್ ದರ ಹೆಚ್ಚಳವು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್‌ಸಿ ತಿಳಿಸಿದೆ.

ರಾಜ್ಯದಲ್ಲಿ ದರ ಏರಿಕೆ ಸರಣಿ ಮುಂದುವರೆದಿದ್ದು, ಇತ್ತೀಚೆಗಷ್ಟೇ ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್​ಆರ್​ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಇದೀಗ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!