spot_img
Monday, March 16, 2026
spot_img

ಕೃಷಿಕರಿಗೆ ಶುಭ ಸುದ್ದಿ | 5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ : ರಾಜ್ಯ ಸರ್ಕಾರ ತೀರ್ಮಾನ

ಜನಪ್ರತಿನಿಧಿ (ಬೆಂಗಳೂರು) : ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದು ಅವರು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!