spot_img
Tuesday, March 17, 2026
spot_img

ಮಾಹಿತಿ | ಯುಗಾದಿ, ರಂಜಾನ್‌ ಹಬ್ಬ : ರಸ್ತೆಗಿಳಿಯಲಿವೆ ಕೆಎಸ್‌ಆರ್‌ಟಿಸಿ 2,000 ಬಸ್‌ಗಳು

ಜನಪ್ರತಿನಿಧಿ (ಬೆಂಗಳೂರು) : ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,000 ಬಸ್‌ಗಳನ್ನು ರಸ್ತೆಗಿಳಿಸಲಿವೆ. ಮಾರ್ಚ್‌ 28 ರಿಂದ 30ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಮಾರ್ಚ್‌ 31 ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.

ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ, ಹೊರರಾಜ್ಯಗಳ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ತಿರುಪತಿ, ವಿಜಯವಾಡ ಸಹಿತ ವಿವಿಧೆಡೆ ವಿಶೇಷ ಬಸ್‌ಗಳು ಸಂಚರಿಸಲಿವೆ.

https://ksrtc.in/ ವೆಬ್‌ಸೈಟ್ ಮೂಲಕ ಇ-ಟಿಕೆಟ್ ಬುಕ್ಕಿಂಗ್‌ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ‍್ರಯಾಣದ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ಸಾಗುವ ದರದಲ್ಲಿ ಶೇ.10 ರಿಯಾಯಿತಿ ದೊರೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!