spot_img
Wednesday, March 18, 2026
spot_img

ವಂಡ್ಸೆ ಹೋಬಳಿಯ ಅರ್ಜಿದಾರರಿಗೆ ಏಪ್ರಿಲ್ ಅಂತ್ಯದೊಳಗೆ ಭೂಮಿ ಮಂಜೂರಾತಿ-ಶಾಸಕ ಗುರುರಾಜ ಗಂಟಿಹೊಳೆ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಹೋಬಳಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಹ ೯೪ ಸಿ ಅರ್ಜಿಗಳನ್ನು ಮುಂದಿನ ತಿಂಗಳು ಏಪ್ರಿಲ್ ಅಂತ್ಯದೊಳಗೆ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳುವಂತೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕುಂದಾಪುರ ತಾಲೂಕು ಕಚೇರಿಯಲ್ಲಿ ವಂಡ್ಸೆ ಹೋಬಳಿಯ ಗ್ರಾಮಗಳಿಗೆ ಸಂಬಂಧಿಸಿದಂತೆ 94 ಸಿ ಅರ್ಜಿಗಳ ವಿಲೇವಾರಿ ಸಂಬಂಧ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು ಕುಂದಾಪುರ ತಾಲೂಕಿನ ಗ್ರಾಮ ಆಡಳಿತಾಧಿಕಾರಿಗಳ ತಂಡ ೯೪ ಸಿ ಹಾಗೂ ಅಕ್ರಮ ಸಕ್ರಮ ಕಡತ ಗಳ ವಿಲೇವಾರಿಗೊಳಿಸಲು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಹಾಗೂ ತಾಲೂಕು ಕಚೇರಿ ತಂಡವು ಕೂಡ ಶ್ಲಾಘನಿಯ ಕಾರ್ಯವನ್ನು ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟ ಅವರು, ಕ್ಷೇತ್ರದ ಬಡ ಜನರ ಹಲವಾರು ವರ್ಷಗಳ ಭೂಮಿಯ ಹಕ್ಕು ಪತ್ರ ಪಡೆಯುವ ಬೇಡಿಕೆಗಳನ್ನು ಈಡೇರಿಸಿದ ಕುಂದಾಪುರ ತಾಲೂಕಿನ ಎಲ್ಲಾ ಹಂತದ ಕಂದಾಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ವಂಡ್ಸೆ ಹೋಬಳಿ ವ್ಯಾಪ್ತಿಯ 10 ಗ್ರಾಮಗಳ ಸುಮಾರು 20 ಅರ್ಹ ಕುಟುಂಬಗಳಿಗೆ ಇದೇ ಸಂದರ್ಭದಲ್ಲಿ ಹಕ್ಕುಪತ್ರ ವಿತರಿಸಿ, ಪಡೆದುಕೊಂಡ ಭೂಮಿಗಳನ್ನು ಕಾಪಾಡಿಕೊಂಡು ಬಂದು ಉತ್ತಮ ಜೀವನ ರೂಪಿಸಿಕೊಳ್ಳಲು ಶುಭ ಹಾರೈಸಿದರು.

ಸಭೆಯಲ್ಲಿ ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಉಪ ತಹಸೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಕ ರಾಘವೇಂದ್ರ ಹಾಗೂ ವಂಡ್ಸೆ ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!