spot_img
Thursday, March 5, 2026
spot_img

ಕುಂದಾಪುರ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿನ ಅಷ್ಟೂ ಕೋಲ್ಡ್ ಸ್ಟೋರೇಜ್ ಅವ್ಯವಸ್ಥೆ | ಅಧಿಕಾರಿಗಳ ವಿರುದ್ಧ ರಮೇಶ್ ಶೆಟ್ಟಿ‌ ವಕ್ವಾಡಿ ಆಕ್ರೋಶ

ಜನಪ್ರತಿನಿಧಿ (ಕುಂದಾಪುರ) : ಆಸ್ಪತ್ರೆಯ ಆಗುಹೋಗುಗಳ ಬಗ್ಗೆ ಆರೋಗ್ಯ ಇಲಾಖೆ ಗಮನಹರಿಸಬೇಕು. ಸರಿಯಾದ ಸೇವೆ ನೀಡಲು ಸೌಲಭ್ಯಗಳ ಕೊರತೆ ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಎದ್ದು ಕಾಣುತ್ತಿದೆ. ಶವಾಗಾರದಲ್ಲಿ ಲಭ್ಯವಿರುವ ನಾಲ್ಕು ಕೋಲ್ಡ್ ಸ್ಟೋರೇಜ್ ಸಂಪೂರ್ಣ ಹಾಳಾಗಿವೆ. ಈ ಬಗ್ಗೆ ಕೆಡಿಪಿ ಸಭೆಗಳಲ್ಲಿ ಪ್ರಸ್ತಾಪ ಮಾಡಿದರೂ ಈವರೆಗೆ ಸರಿ ಮಾಡುವ ಕೆಲಸವಾಗಲಿಲ್ಲ ಎಂದು ಕುಂದಾಪುರ ತಾಲೂಕು ಕೆಡಿಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧಿಸಿದಂತೆ ಜನಪ್ರತಿನಿಧಿ ಪತ್ರಿಕೆಯೊಂದಿಗೆ ಮಾತನಾಡಿದ ರಮೇಶ್ ಶೆಟ್ಟಿ ವಕ್ವಾಡಿ, ಈ ಬಗ್ಗೆ ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿ ತತ್‌ಕ್ಷಣ ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದ್ದಲ್ಲದೆ, ಈ ಸಂಬಂಧಿಸಿದಂತೆ ಅಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು.

ನಿನ್ನೆ(ಶುಕ್ರವಾರ) ಬಳ್ಕೂರು‌ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟ ಇಬ್ಬರ ಮೃತದೇಹ‌ ಪೋಸ್ಟ್ ಮಾರ್ಟಮ್ ಗಾಗಿ ಕುಂದಾಪುರ ತಾಲೂಕು ಆಸ್ಪತ್ರೆಗೆ ತರಲಾಗಿತ್ತು. ಈ ಸಂದರ್ಭ ಆಸ್ಪತ್ರೆಯ ಶವಾಗಾರದಲ್ಲಿದ್ದ ನಾಲ್ಕೂ ಕೋಲ್ಡ್ ಸ್ಟೋರೇಜ್ ಹಾಳಾಗಿರುವುದನ್ನು ಗಮನಿಸಿ ಅವರು ಆಕ್ರೋಶ ಹೊರಹಾಕಿದರು.

ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳ ಬೇಜಾವಬ್ದಾರಿ ಎದ್ದು ಕಾಣುತ್ತಿದೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯ ಈ ಅವ್ಯವಸ್ಥೆಗೆ ಕಾರಣ ಎಂದು ಅವರು ಹೇಳಿದರು. ಶೀಘ್ರದಲ್ಲೇ ಈ ಸಮಸ್ಯೆ ಪರಿಹರಿಸುವುದರ ಬಗ್ಗೆ ಆರೋಗ್ಯ ಇಲಾಖೆಯ ಸಚಿವರ ಗಮನಕ್ಕೆ ತರುವುದಾಗಿ ಅವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!