spot_img
Sunday, June 14, 2026
spot_img

ಕುಂದಾಪುರ ಉಪ ವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆರ್

ಕುಂದಾಪುರ: ಕುಂದಾಪುರ ಉಪ ವಿಭಾಗಾಧಿಕಾರಿಯಾಗಿ ರಶ್ಮಿ ಎಸ್.ಆರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ರಶ್ಮಿ ಅವರು ಈ ಹಿಂದೆ ಇಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ಜನಮ ಮೆಚ್ಚುಗೆ ಗಳಿಸಿದ್ದರು. ರಶ್ಮಿ ಅವರು 2014ನೇ ಬ್ಯಾಚ್ ಕೆ.ಎ.ಎಸ್ ಅಧಿಕಾರಿ. 2017ರಲ್ಲಿ ದ.ಕ ಜಿಲ್ಲೆಯಲ್ಲಿ ಪ್ರೊಬೇಷನರಿ ಮುಗಿಸಿ, ೨೦೧೯ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು. 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು. 2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು. ಜುಲೈ 2024ರಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದರು. ಬಳಿಕ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿದ್ದರು.

ದಿಢೀರ್ ಬೆಳವಣಿಗೆಯಲ್ಲಿ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಅವರು ಕರ್ತವ್ಯ ಲೋಪದಿಂದ ಅಮಾನತುಗೊಂಡ ಕಾರಣ ಕುಂದಾಪುರ ಉಪ ವಿಭಾಗಕ್ಕೆ ರಶ್ಮಿ ಅವರನ್ನು ವರ್ಗಾವಣೆ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!