spot_img
Sunday, March 22, 2026
spot_img

ಬೆಣ್ಗೇರೆ ಶ್ರೀ ನಾಗ ದೇವಸ್ಥಾನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ| ಪಲ್ಲಪೂಜೆ

ಗಂಗೊಳ್ಳಿ : ಗುಜ್ಜಾಡಿ ಗ್ರಾಮದ ಬೆಣ್ಗೇರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ಅಷ್ಟಪವಿತ್ರ ನಾಗಮಂಡಲೋತ್ಸವ ವಿವಿಧ ಧಾರ್ಮಿಕಗಳು, ಸಂದರ್ಶನ, ಪಲ್ಲಪೂಜೆ ಸೋಮವಾರ ಪೂರ್ವಾಹ್ನ ನಡೆಯಿತು.

ಬೆಳಿಗ್ಗೆ ಗುರು ಗಣಪತಿ ಪೂಜೆಯೊಂದಿಗೆ ಅಷ್ಟ ಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭಗೊಂಡಿತು. ಚತುರ್ವೇದ ಪಾರಾಯಣ, ಬ್ರಹ್ಮಕಲಶ ಸ್ಥಾಪನೆ, ಆಯುತ ಸಂಖ್ಯಾ ತಿಲಹೋಮ, ಪವಮಾನ ಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, ಪ್ರಧಾನ ಅಧಿವಾಸ ಹೋಮ, ಕಲಶಾಭಿಷೇಕ, ಕಲ್ಪೋಕ್ತ ಮಹಾಪೂಜೆ, ಮಹಾಮಂಗಳಾರತಿ, ನಾಗದೇವರ ಸಂದರ್ಶನ, ಪಲ್ಲಪೂಜೆ, ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಪ್ರಧಾನ ತಂತ್ರಿಗಳಾದ ಬಲರಾಮ ಸೋಮಯಾಜಿ ಹಾಗೂ ಪ್ರಧಾನ ಪುರೋಹಿತ ರಾಘವೇಂದ್ರ ಅಡಿಗ ನಾಯಕವಾಡಿ ನೇತೃತ್ವದಲ್ಲಿ ವಿದ್ವತ್‌ಪೂರ್ಣ ವೈದಿಕರಿಂದ ನಡೆಯಿತು.
ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಂದ ಹಾಗೂ ಪರ ಊರುಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಮಹಾ ಅನ್ನಸಂತರ್ಪಣೆಯಲ್ಲಿ ಸುಮಾರು ೧೫ ಸಾವಿರಕ್ಕೂ ಮಿಕ್ಕಿ ಭಕ್ತರು ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿದರು.

ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಕಾರ್ಯದರ್ಶಿ ಶ್ರೀಧರ ಪಿ.ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ವಿ.ಮೇಸ್ತ, ಗೌರವಾಧ್ಯಕ್ಷ ಮಡಿಕಲ್ ಸುರೇಶ ಖಾರ್ವಿ, ಕಾರ್ಯದರ್ಶಿ ರಾಘವೇಂದ್ರ ವಿ.ಮೇಸ್ತ, ಶ್ರೀ ನಾಗ ದೇವಸ್ಥಾನ ಸೇವಾ ಸಮಿತಿ ಸದಸ್ಯರು, ಸಾರ್ವಜನಿಕ ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ನಾಗಶ್ರೀ ಮಹಿಳಾ ಮಂಡಳಿ ಸದಸ್ಯರು, ವಿವಿಧ ಸಮಾಜದ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!