spot_img
Saturday, March 21, 2026
spot_img

ಕುಂದಾಪುರ-ಹೊಸಂಗಡಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಲು ಮನವಿ

ಕುಂದಾಪುರ, ಮಾ.31: ಕುಂದಾಪುರ-ಹೊಸಂಗಡಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಬೇಕು ಎಂದು ಕುಂದಾಪುರ ಜಿಲ್ಲಾ ಹೋರಾಟ ಸಮಿತಿ ಮೂಲಕ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕುಂದಾಪುರ-ಸೋಲಾಪುರ, ರಸ್ತೆ ಮಾರ್ಗ ಇದಾಗಿದ್ದು, ತುಂಬಾ ಇಕ್ಕಟ್ಟಿನಿಂದ ಕೂಡಿದ್ದು, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅದೆಷ್ಟೋ ಜನ ಮೃತಪಟ್ಟಿದ್ದಾರೆ. ಈ ಮಾರ್ಗ ಶಿವಮೊಗ್ಗ ದಾವಣಗೆರೆ ಬೆಂಗಳೂರು, ಇನ್ನ ರಾಜ್ಯದ ವಿವಿಧ ಜಿಲ್ಲೆಗಳಿಗೆ ಮುಖ್ಯ ಸಂಪರ್ಕ ಮಾರ್ಗವಾಗಿದೆ. ಆದ್ದರಿಂದ, ಆದಷ್ಟು ಬೇಗ ಈ ಮಾರ್ಗವನ್ನು ಉತ್ತಮ ಗುಣಮಟ್ಟದ ರಾಷ್ಟ್ರೀಯ ಹೆದ್ದಾರಿಯನ್ನಾಗಿ, ಪರಿವರ್ತಿಸಬೇಕು, ಇದನ್ನು ಆದಷ್ಟು ಬೇಗ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಬೇಕೆಂದು ಶ್ರೀನಿವಾಸ ಪೂಜಾರಿ ಅವರಲ್ಲಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ಜಿಲ್ಲಾ, ಹೋರಾಟ ಸಮಿತಿಯ ಮುಂಬಾರು ದಿನಕರ ಶೆಟ್ಟಿ, ಕಾಮರಾಜ್ ಶೆಟ್ಟಿ ಹಳ್ನಾಡು, ಸದಾನಂದ ಬಳ್ಕೂರು, ಮಿಥುನ್ ಶೆಟ್ಟಿ, ರವಿ ಕೊಟ, ಚಂದ್ರಶೇಖರ್ ಬಸ್ರೂರು, ಲಕ್ಷ್ಮಣ ಪೂಜಾರಿ ಬಳ್ಕೂರು, ಸದಾನಂದ ಕಿಣಿ, ಅಶೋಕ್ ಅಂಪಾರು ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!