spot_img
Monday, March 16, 2026
spot_img

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕ ಭವನ ʼಕಾವೇರಿʼ ಉದ್ಘಾಟನೆ | ಈ ಭವನ ಕರ್ನಾಟಕದ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ನವ ದೆಹಲಿ) : ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ನಿನ್ನೆಯಷ್ಟೇ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ದೆಹಲಿಯಲ್ಲಿ 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರು, ಸಂಸದರು ಮತ್ತು ಇತರ ರಾಜತಾಂತ್ರಿಕರಿಗೆ ವಸತಿ ಒದಗಿಸುವ ಈ ಭವನವು ಕರ್ನಾಟಕದ ರಾಯಭಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಈ ಹಿಂದೆ ಇದು ಮೈಸೂರು ಭವನವಾಗಿತ್ತು. ದೆಹಲಿಯಲ್ಲಿ ಒಟ್ಟು ಮೂರು ಕರ್ನಾಟಕ ಭವನಗಳು ಇವೆ. ಸುಭದ್ರ ರಾಜ್ಯ ನಿರ್ಮಾಣದಲ್ಲಿ ಎಲ್ಲರ ಭಾಗವಹಿಸುವಿಕೆ ಅಗತ್ಯವಾಗಿದ್ದು, ಕೇಂದ್ರ ಸರ್ಕಾರದ ಬಳಿ ಹಲವು ಕೆಲಸ ಕಾರ್ಯಗಳಿಗಾಗಿ ಅಧಿಕಾರಿಗಳು, ಸಚಿವರು, ಶಾಸಕರು ದೆಹಲಿಗೆ ಬರಬೇಕಾಗುತ್ತದೆ. ಇವರೆಲ್ಲರಿಗೂ ಕರ್ನಾಟಕ ಭವನ ತಂಗಲು ಸಹಾಯವಾಗುತ್ತದೆ ಎಂದರು. ಅಲ್ಲದೆ, ಕರ್ನಾಟಕ ಭವನ-2ರ ಪುನರ್‌ ನಿರ್ಮಾಣ ಮಾಡುವ ಯೋಜನೆಯೂ ಇದೆ ಎಂದು ತಿಳಿಸಿದರು.

ಕೊರೋನಾ ಸೇರಿ ಹಲವು ಸಂಕಷ್ಟಗಳಿಂದಾಗಿ ಕಟ್ಟಡ ಕಾಮಗಾರಿಗೆ ವಿಳಂಬವಾಯಿತು. ಈಗ ಭವ್ಯ ಕಟ್ಟಡ ನಿರ್ಮಾಣ ಗೊಂಡಿದೆ. ಕರ್ನಾಟಕ ಭವನ ಬೆಳೆದು ಬಂದ ಇತಿಹಾಸ ಕುರಿತು ಬೋರ್ಡ್ ಹಾಕಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯವರು ಸೂಚಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಜೊತೆಗೆ, ಖರ್ಗೆ ಯವರ ಸಲಹೆಯಂತೆ ಶಾಸಕರು ತಂಗಲು ಇನ್ನಷ್ಟು ಅನುಕೂಲಗಳನ್ನು ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ​​ಮುನಿಯಪ್ಪ, ನವದೆಹಲಿಯಲ್ಲಿ ರಾಜ್ಯದ ವಿಶೇಷ ಪ್ರತಿನಿಧಿಗಳಾದ ಟಿ.ಬಿ. ಜಯಂದ್ರ ಮತ್ತು ಪ್ರಕಾಶ್ ಹುಕ್ಕೇರಿ, ರಾಜ್ಯಸಭಾ ಸದಸ್ಯರಾದ ಜೈರಾಮ್ ರಮೇಶ್ ಮತ್ತು ಸುಧಾ ನಾರಾಯಣಮೂರ್ತಿ, ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್, ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!