spot_img
Tuesday, March 17, 2026
spot_img

ವಕ್ಫ್‌ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿ : ಸೋನಿಯಾ ಗಾಂಧಿ

ಜನಪ್ರತಿನಿಧಿ (ನವ ದೆಹಲಿ) : ವಕ್ಫ್‌ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ  ಮೇಲಿನ ದಾಳಿ ಎಂದು ಹೇಳಿರುವ ಕಾಂಗ್ರೆಸ್‌ ನ ಸಂಸದೀಯ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ, ಇದು ಸಮಾಜವನ್ನು ಶಾಶ್ವತವಾಗಿ ಧೃವೀಕರಣ ಸ್ಥಿತಿಯಲ್ಲಿಡಲು ಬಿಜೆಪಿ ಮಾಡಿದ ತಂತ್ರ ಎಂದು ಅವರು ಕಿಡಿಕಾರಿದ್ದಾರೆ.

ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ಲಭಿಇದ ಬಳಿಕ ಪ್ರತಿಕ್ರಿಯಿಸಿದ ಅವರು, ʼಕೆಳಮನೆಯಲ್ಲಿ ಮಸೂದೆಯನ್ನು ಬಲವಂತವಾಗಿ ಮಂಡಿಸಲಾಗಿದೆʼ ಎಂದು ಅವರು ಆರೋಪಿಸಿದ್ದಾರೆ.

ಇಲ್ಲಿನ ಸಂವಿಧಾನ ಸದನದಲ್ಲಿ ಕಾಂಗ್ರೆಸ್‌ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವನ್ನುಯ ಅಪವಿತ್ರಗೊಳಿಸುವ ಮತ್ತೊಂದು ಒಂದು ದೇಶ ಒಂದು ಚುನಾವಣೆ ಮಸೂದೆ ಬರುತ್ತಿದೆ. ಅದನ್ನೂ ಒಟ್ಟಾಗಿ ವಿರೋಧಿಸಬೇಕು ಎಂದು ಕರೆ ನೀಡಿದ್ದಾರೆ.

ಶಿಕ್ಷಣ ನಾಗರಿಕ ಹಕ್ಕು ಹಾಗೂ ಸ್ವಾತಂತ್ರ್ಯ, ಒಕ್ಕೂಟ ವ್ಯವಸ್ಥೆ ಅಥವಾ ಚುನಾವಣೆ ಪ್ರಕ್ರಿಯೆ ಆಗಿರಲಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶವನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಸಂವಿಧಾನ ಕೇವಲ ಪುಸ್ತಕದಲ್ಲಿ ಮಾತ್ರ ಉಳಿದಿದೆ. ಅದನ್ನೂ ಅವರು ನಾಶ ಮಾಡಲು ಯತ್ನಿಸಿದ್ದಾರೆ ಎನ್ನುವುದನ್ನು ನಾವು ಬಲ್ಲೆವು ಎಂದು ಸೋನಿಯಾ ಹೇಳಿದ್ದಾರೆ.

ಮೋದಿ ಸರ್ಕಾರದ ವೈಫಲ್ಯ ಮತ್ತು ಭಾರತವನ್ನು ಕಣ್ಗಾವಲು ರಾಜ್ಯವನ್ನಾಗಿ ಪರಿವರ್ತಿಸುವ ಉದ್ದೇಶವನ್ನು ಬಹಿರಂಗಪಡಿಸಲು ನಾವೆಲ್ಲರೂ ನ್ಯಾಯಯುತವಾಗಿ ಹೋರಾಡುವುದನ್ನು ಮುಂದುವರಿಸುವುದು ಅತ್ಯಗತ್ಯ ಎಂದು ಸಂಸದರಿಗೆ ಸೋನಿಯಾ ತಿಳಿಸಿದ್ದಾರೆ.

೨೦೦೪-೨೦೧೪ರ ಅವಧಿಯ ನಮ್ಮ ಉಪಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮದೇ ವೈಯಕ್ತಿಕ ಸಾಧನೆಗಳೆಂದು ಮರುಬ್ರ್ಯಾಂಡ್‌, ಮರುಪ್ಯಾಕ್‌, ಮಾರುಕಟ್ಟೆ ಮಾಡಿದ್ದಾರೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಅದನ್ನೂ ನಮ್ಮದೇ ಆದ ಸಾರ್ವಜನಿಕ ಸಂಪರ್ಕ ಚಟುವಟಿಕೆಗಳ ಮೂಲಕ ಬಹಿರಂಗಪಡಿಸಬೇಕಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಸತ್ತಿನ ಉಭಯ ಸದನಗಳ ಕಾರ್ಯನಿರ್ವಹಣೆಯ ಬಗ್ಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ಸಮಸ್ಯೆಗಳನ್ನು ಎತ್ತಲು ಅವಕಾಶ ನೀಡದಂತೆ ಆಡಳಿತ ಪಕ್ಷಗಳು ಆಗಾಗ್ಗೆ ಗೊಂದಲ ಸೃಷ್ಟಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!