spot_img
Tuesday, March 17, 2026
spot_img

ಜಿಲ್ಲೆಯ ಶಾಸಕರ ಕಣ್ಣಿಗೆ ರೈತ ಸಂಘದ ಅಹೋರಾತ್ರಿ ಸತ್ಯಾಗ್ರಹ ಕಾಣಿಸಲೇ ಇಲ್ಲ : ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ಆಕ್ರೋಶ

ಜನಪ್ರತಿನಿಧಿ (ಕುಂದಾಪುರ /ಉಡುಪಿ) : ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ನೇರ ಕಾರಣ. ಬೆಲೆ ಏರಿಕೆ ಕರ್ನಾಟಕದಲ್ಲಿ ಮಾತ್ರ ಆಗಿರುವುದಲ್ಲ. ದೇಶದ ಎಲ್ಲೆಡೆ ಇದೇ ಪರಿಸ್ಥಿತಿ ಇದೆ. ತಮ್ಮದೇ ಸರ್ಕಾರ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿಯೂ ಬೆಲೆ ಏರಿಕೆಯಾಗಿರುವುದು ಬಿಜೆಪಿಯವರಿಗೆ ತಿಳಿದಿಲ್ಲವೇ ಎಂದು ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ಆಕ್ರೋಶ ಹೊರ ಹಾಕಿದ್ದಾರೆ.

ಈ ಸಂಬಂಧಿಸಿದಂತೆ ಜನಪ್ರತಿನಿಧಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ಜನರ ದಿಕ್ಕನ್ನು ತಪ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಅಹೋರಾತ್ರಿ ಧರಣಿ ನಡೆಸಿದೆ. ಧರಣಿಯಲ್ಲಿ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರೂ ಸಕ್ರಿಯವಾಗಿ ಭಾಗಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಶಾಸಕರಿಗೆ ತಮ್ಮ ಕಾಲಿನ ಬುಡದಲ್ಲೇ ಇರುವ ಸಮಸ್ಯೆಯ ಬಗ್ಗೆ ಅರಿವಿಲ್ಲ. ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ಹಗರಣ ನಡೆದಿರುವುದರ ಬಗ್ಗೆ ಜಿಲ್ಲೆಯ ಒಬ್ಬನೇ ಒಬ್ಬ ಬಿಜೆಪಿಯ ಚುನಾಯಿತ ಪ್ರತಿನಿಧಿ ಈವರೆಗೆ ಧ್ವನಿ ಎತ್ತಿಲ್ಲ. ರೈತ ಸಂಘದ ಅಹೋರಾತ್ರಿ ಧರಣಿ ಬಿಜೆಪಿ ಶಾಸಕರು, ಸಂಸದರ ಕಣ್ಣಿಗೆ ಕಾಣಿಸಲೇ ಇಲ್ಲ ಎಂದು ಅವರು ಕಿಡಿ ಕಾರಿದರು.

ಉಡುಪಿ ಜಿಲ್ಲೆಯ ರೈತ ಸಂಘ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಬಳಿ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಕಳೆದ ೪೧ ದಿನಗಳಿಂದ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಹಗರಣದ ವಿರುದ್ಧ ಹಾಗೂ ತನಿಖೆಯ ವಿಳಂಬ ನೀತಿಯ ವಿರುದ್ಧ ಅಹೋರಾತ್ರಿ ಸತ್ಯಾಗ್ರಹ ನಡೆಸುತ್ತಿದೆ. ಧರಣಿಯಲ್ಲಿ ಭಾಗವಹಿಸುವುದು ಬಿಡಿ, ಒಬ್ಬನೇ ಒಬ್ಬ ಬಿಜೆಪಿಯ ಶಾಸಕ ಈ ಬಗ್ಗೆ ಮಾತಾಡಿಲ್ಲ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದಾರೆ. ಜಿಲ್ಲೆಯ, ಕ್ಷೇತ್ರದ ಹಿತ ಕಾಯಬೇಕಾದ ಚುನಾಯಿತ ಪ್ರತಿನಿಧಿಗಳು ಈ ಸಂಬಂಧಿಸಿದಂತೆ ಮೌನ ವಹಿಸಿದ್ದಾರೆ. ಸಕ್ಕರೆ ಕಾರ್ಖಾನೆಯ ಹಗರಣದಲ್ಲಿ ಭಾಗಿಯಾಗಿರುವ ಪ್ರಮುಖ  ಆರೋಪಿ, ತಮ್ಮದೇ ಪಕ್ಷದಲ್ಲಿ ಗುರುತಿಸಿಕೊಂಡಿರುವುದರಿಂದ ಜಿಲ್ಲೆಯ ಬಿಜೆಪಿ ಚುನಾಯಿತ ಪ್ರತಿನಿಧಿಗಳು ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಸದನದ ಕಲಾಪಗಳಲ್ಲಿಯೂ ಈ ಬಗ್ಗೆ ಪ್ರಸ್ತಾಪಿಸಿಲ್ಲ. ಚುನಾವಣೆ ಬಂದಾಗ ಅಷ್ಟೇ ಇವರಿಗೆ (ಬಿಜೆಪಿಗರಿಗೆ) ರೈತರು ನೆನಪಾಗುತ್ತಾರೆ ಎಂದು ಅವರು ಸಿಟ್ಟಾದರು.

ಉಡುಪಿ ಜಿಲ್ಲೆಯ ಬಿಜೆಪಿ ಚುನಾಯಿತ ಪ್ರತಿನಿಧಿಗಳ ಈ ವರ್ತನೆಯನ್ನು ಗಮನಿಸಿದರೇ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಹಗರಣದಲ್ಲಿ ಇವರ ಪಾಲೂ ಇರಬಹುದೇನೋ ಎಂಬ ಸಂಶಯ ವ್ಯಕ್ತವಾಗುತ್ತದೆ ಎಂದು ಅವರು ಹೇಳಿದರು.

ಬಿಜೆಪಿಯವರು ಅಸಲಿಗೆ ಜನಾಕ್ರೋಶ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ : ಕಾನ್ಮಕ್ಕಿ

ತರಕಾರಿ ಹಾಗೂ ಬೇಳೆ ಕಾಳುಗಳು ಸೇರಿದಂತೆ ಅಡುಗೆಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ಒಂದೂವರೆ ಪಟ್ಟು ಹೆಚ್ಚಾಗಿವೆ. ಪ್ರಸ್ತುತ ಕಚ್ಚಾ ತೈಲದ ಬೆಲೆ 34% ಇಳಿಕೆಯಾಗಿದೆ, ಆದರೆ ದೇಶದ ನಾಗರಿಕರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ದುಬಾರಿ ಸುಂಕ, ತೆರಿಗೆಗಳನ್ನು ವಿಧಿಸಿ 36.58 ಲಕ್ಷ ಕೋಟಿ ರೂ. ಸಂಗ್ರಹಿಸಿದೆ ಕೇಂದ್ರ ಸರ್ಕಾರ. ಜೀವ ವಿಮೆ, ಅರೋಗ್ಯ ವಿಮೆಗಳ ಮೇಲೂ 18% ಜಿಎಸ್ಟಿ ಹೇರಲಾಗಿದೆ, ಮೊದಲ ಬಾರಿಗೆ ಕೃಷಿ ಉತ್ಪನ್ನಗಳಿಗೂ ಜಿಎಸ್ಟಿ ಹಾಕಲಾಗಿದೆ. ಏಪ್ರಿಲ್ ನಿಂದ ಎಟಿಎಂ ಶುಲ್ಕಗಳನ್ನೂ ಏರಿಸುತ್ತಿದೆ ಕೇಂದ್ರ ಸರ್ಕಾರ. ಅಕ್ಕಿ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆಯಲ್ಲಿ 70% ರಿಂದ 80%ನಷ್ಟು ದುಪ್ಪಟಾಗಿವೆ. ಟೋಲ್ ದರ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಕಳಪೆ ಆರ್ಥಿಕ ನೀತಿಯಿಂದಾಗಿ ಹಣದುಬ್ಬರವು ಗಣನೀಯ ಏರಿಕೆಯಾಗಿದೆ. ಇದಕ್ಕೆ ಸರಿ ಹೊಂದಿಸಲು ಅನಿವಾರ್ಯವಾಗಿ ನಮ್ಮ ಸರ್ಕಾರ ಕೆಲವೊಂದಿಷ್ಟು ಬೆಲೆಗಳನ್ನು ಪರಿಷ್ಕರಿಸಿದೆ. ಆದರೆ ಅದಕ್ಕೆ ಮೂಲ ಕಾರಣ ಕೇಂದ್ರ ಸರ್ಕಾರ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!