spot_img
Thursday, April 2, 2026
spot_img

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಳ್ಳೂರು 74 ಗ್ರಾಮದಲ್ಲಿ 14 ಕೊರಗ ಕುಟುಂಬಗಳಿಗೆ ಮನೆ ನಿರ್ಮಾಣ: ಏ.7ರಂದು ಭೂಮಿ ಪೂಜೆ

ಕುಂದಾಪುರ, ಏ.5: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ., ಬೆಂಗಳೂರು ಇದರ ವತಿಯಿಂದ ಕುಂದಾಪುರ ತಾಲೂಕು ಉಳ್ಳೂರು 74 ಗ್ರಾಮದ ಕೊರಗ ಕಾಲೋನಿಯಲ್ಲಿ 14 ಕೊರಗ ಕುಟುಂಬಗಳಿಗೆ ಸುಮಾರು 2.5 ಕೋಟಿ ರೂ ವೆಚ್ಚದಲ್ಲಿ ಮನೆ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಏಪ್ರಿಲ್ 7 ಸೋಮವಾರ ಬೆಳಿಗ್ಗೆ 10-30ಕ್ಕೆ ನಡೆಯಲಿದೆ ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷರಾದ ಹಾಲಾಡಿ ನಾಗರಾಜ ಶೆಟ್ಟಿ ತಿಳಿಸಿದರು.

ಅವರು ಶನಿವಾರ ಕುಂದಾಪುರ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ಎಚ್.ಎಸ್ ಶೆಟ್ಟಿಯವರ ಮಹತ್ವಕಾಂಕ್ಷೆಯ 100 ಕೊರಗ ಕುಟುಂಬಗಳಿಗೆ ಮನೆ ನಿರ್ಮಾಣ ಯೋಜನೆಯ ಅಂಗವಾಗಿ ಈಗಾಗಲೇ ಜನ್ನಾಡಿಯಲ್ಲಿ 2 ಕೋಟಿಗೂ ಹೆಚ್ಚು ವೆಚ್ಚದಲ್ಲಿ 14 ಸುಂದರವಾದ ಮನೆಗಳ ನಿರ್ಮಾಣ ಮಾಡಿ ಕಳೆದ ನವಂಬರ್ ತಿಂಗಳಲ್ಲಿ ಹಸ್ತಾಂತರ ಮಾಡಲಾಗಿದೆ. ಎರಡನೇ ಹಂತದಲ್ಲಿ ಸ್ವತಃ ಎಚ್.ಎಸ್.ಶೆಟ್ಟಿಯವರೇ ಉಳ್ಳೂರು 74 ಗ್ರಾಮದ ಕೊರಗ ಕಾಲೋನಿಗೆ ಭೇಟಿ ಆ ಕುಟುಂಬಗಳ ಸ್ಥಿತಿಗತಿ ನೋಡಿ 14 ಕುಟುಂಬಗಳಿಗೆ ಸುಸಜ್ಜಿತವಾದ ಮನೆ ನಿರ್ಮಾಣ ಯೋಜನೆ ಸಿದ್ಧ ಪಡಿಸಿದ್ದಾರೆ ಎಂದರು.

ಏ.7ರಂದು ನಡೆಯುವ ಕಾರ್ಯಕ್ರಮದಲ್ಲಿ ಭೂಮಿ ಪೂಜೆ ಮತ್ತು ಶಿಲಾನ್ಯಾಸವನ್ನು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಸಮಾಜಕಲ್ಯಾಣ ಸಚಿವರಾದ ಹೆಚ್.ಸಿ ಮಹಾದೇವಪ್ಪ ಉದ್ಘಾಟಿಸಲಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶುಭ ಸಂದೇಶ ನೀಡಲಿದ್ದಾರೆ. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದಾಪುರ ಕ್ಷೇತ್ರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಯಕ್ಷಗಾನ ಕಲಾ ರಂಗ ಉಡುಪಿ ಇದರ ಕಾರ್ಯದರ್ಶಿ ಮುರಳಿ ಕಡೇಕಾರ್, ಕರ್ನಾಟಕ ಮತ್ತು ಕೇರಳದ ಕೊರಗಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಸುಶೀಲ ನಾಡ, ಉಳ್ಳೂರು 74 ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕುಸುಮ ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಸುಮಾರು 2000ಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಆರ್ಹ 14 ಕುಟುಂಬಗಳಿಗೆ ಸುಮಾರು 2.5ಕೋಟಿಗೂ ಹೆಚ್ಚು ವೆಚ್ಚದಲ್ಲಿ ಸುಂದರವಾದ ಮನೆಗಳ ನಿರ್ಮಾಣವಾಗಲಿದೆ ಎಂದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ., ಬೆಂಗಳೂರು ಶಿಕ್ಷಣ, ಸಮಾಜ ಸೇವೆ, ಧಾರ್ಮಿಕ ಕ್ಷೇತ್ರಕ್ಕೆ ಅಗಾಧವಾದ ಕೊಡುಗೆ ನೀಡುತ್ತಿದೆ. ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಬ್ರಹ್ಮಾವರ ಸರಕಾರಿ ಶಾಲೆಗಳು ಹಾಗೂ ಪದವೀಪೂರ್ವ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಇಲಾಖೆಯೊಂದಿಗೆ ಟ್ರಸ್ಟ್ ಒಡಂಬಡಿಕೆ ಮಾಡಿಕೊಂಡು ಸುಮಾರು 3 ಕೋಟಿ ವೆಚ್ಚದಲ್ಲಿ ಈಗಾಗಲೇ ಮೂಲಭೂತ ಸೌಕರ್ಯವನ್ನು ಒದಗಿಸಿದೆ. 2023-24ನೇ ಸಾಲಿನಲ್ಲಿ ವಿದ್ಯಾರ್ಥಿ ಸಮುದಾಯದ ಅಭ್ಯುದಯ ಹಲವಾರು ಚಟುವಟಿಕೆಗಳಿಗೆ ಈಗಾಗಲೇ ಏಳು ಕೋಟಿ ರೂ ದೇಣಿಗೆ ನೀಡಿದೆ. ಉಡುಪಿ ಜಿಲ್ಲೆಯ 350 ಶಾಲೆಯ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಲ್ಲಿ 41,000 ಜೊತೆ ಶಾಲಾ ಸಮವಸ್ತ್ರಗಳನ್ನು ವಿತರಿಸಿದೆ. ಕರಾವಳಿಯ ಹಲವು ಜಿಲ್ಲೆಗಳಲ್ಲಿ ಐ.ಐ.ಟಿ ಮದ್ರಾಸ್ ಇವರ ಸಹಯೋಗದಲ್ಲಿ ಆನ್‍ಲೈನ್ ತರಬೇತಿ ಮತ್ತು ಕೌನ್ಸಲಿಂಗ್ ಆಯೋಜಿಸಲಾಗಿದೆ. ಈಗಾಗಲೆ ಉಡುಪಿ ಜಿಲ್ಲೆಯ 20 ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ತರಬೇತಿ ಆರಂಭಿಸಲಾಗಿದೆ ಎಂದರು.

ಸಾಮಾಜಿಕ ಕಾರ್ಯಕರ್ತ ಚಿಟ್ಟೆ ರಾಜಗೋಪಾಲ ಹೆಗ್ಡೆ ಸ್ವಾಗತಿಸಿ ಮಾತನಾಡಿ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮೂಲಕ ಡಾ.ಎಚ್.ಎಸ್ ಶೆಟ್ಟಿ ಅವರು ಶಿಕ್ಷಣ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಉಳ್ಳೂರು 74 ಗ್ರಾಮದಲ್ಲಿ ಅತ್ಯಂತ ಆರ್ಥಿಕ ಸಂಕಷ್ಟದಲ್ಲಿರುವ 14 ಕೊರಗ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮನೆ ನಿರ್ಮಿಸಿ ಕೊಡುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇದೊಂದು ಮಾನವೀಯ ಕಳಕಳಿ ದೊಡ್ಡ ಯೋಜನೆ ಆಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಎಂ.ಎಂ.ಸಿ.ಎಲ್ ಸಂಸ್ಥೆ ಸಿಬ್ಬಂದಿ ದಿಲೀಪ್, ಉಳ್ಳೂರು 74 ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಅಮಾಸೆಬೈಲು ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!