spot_img
Wednesday, April 1, 2026
spot_img

ವೀರ ಚಂದ್ರಹಾಸ | ಸರ್ಕಾರದಿಂದ ಅಗತ್ಯ ಸಹಕಾರ : ರವಿ ಬಸ್ರೂರು ಅವರಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ಜನಪ್ರತಿನಿಧಿ (ಬೆಂಗಳೂರು/ಕುಂದಾಪುರ) : ಚಂದನವನದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ನಿರ್ದೇಶನದ ಬಹು ನಿರೀಕ್ಷಿತ ʼವೀರ ಚಂದ್ರಹಾಸʼ ಸಿನೆಮಾಕ್ಕೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

ರವಿ ಬಸ್ರೂರು ಅವರು ಚಿತ್ರ ಬಿಡುಗಡೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಸಿಎಂ, ರವಿ ಬಸ್ರೂರು ಹಾಗೂ ಅವರ ತಂಡದ ಶ್ರಮಕ್ಕೆ ಭೇಶ್‌ ಅಂದಿದ್ದಾರೆ.

ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ “ವೀರ ಚಂದ್ರಹಾಸ” ಸಿನಿಮಾದ ಟ್ರೇಲರ್ ಅನ್ನು ಬಿಡುಗಡೆಗೊಳಿಸಿ, ಹೊಸ ಪ್ರಯೋಗಕ್ಕೆ ಮುಂದಾಗಿರುವ ಚಿತ್ರತಂಡದ ಪ್ರಯತ್ನ ಯಶಸ್ವಿಯಾಗಲೆಂದು ಅವರು ಶುಭ ಹಾರೈಸಿದ್ದಾರೆ.

ತಮಿಳು, ಮಲಯಾಳಂ, ಕನ್ನಡ ಸೇರಿ ಬಹುಭಾಷೆಗಳ ಸಿನಿಮಾಗಳಲ್ಲಿ ತನ್ನ ಕಲಾ ಸಾಮರ್ಥ್ಯ ಪ್ರದರ್ಶಿಸಿ ಜನಮೆಚ್ಚುಗೆ ಗಳಿಸಿದ್ದೀರಿ. ಈ ಸಿನಿಮಾ ಕೂಡ ಯಶಸ್ವಿ ಕಾಣುತ್ತದೆ. ಸರ್ಕಾರದಿಂದ ಅಗತ್ಯ ಇರುವ ಸಹಕಾರ ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ನಾಳೆ (ಆದಿತ್ಯವಾರ) ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಶಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ, ವೀರ ಚಂದ್ರಹಾಸ ಸಿನೆಮಾದಲ್ಲಿ ನಟಿಸಿದ ಕಲಾವಿದರನ್ನು ಗುರುತಿಸುವ ಕಾರ್ಯಕ್ರಮ, ಯಕ್ಷಗಾನದ ಎಲ್ಲಾ ಮೇಳದ ಯಜಮಾನರನ್ನೂ ಗೌರವಿಸುವ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!