spot_img
Wednesday, April 1, 2026
spot_img

ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನರ್ ಅಷ್ಟಬಂಧ , ಬ್ರಹ್ಮಕಲಶೋತ್ಸವ ಸಂಪನ್ನ

 

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕುಂದಾಪುರ ತಾಲೂಕು ಸೇನಾಪುರ ಗ್ರಾಮದ ಪುರಾಣ ಪ್ರಸಿದ್ಧ ನಾಗಕ್ಷೇತ್ರವಾದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಗುಡ್ಡಮ್ಮಾಡಿಯಲ್ಲಿ ಪುನರ್ ಅಷ್ಟಬಂಧ ಮತ್ತು ಬ್ರಹ್ಮಕಲಶೋತ್ಸವ ಏಪ್ರಿಲ್ 4ರಿಂದ ಏಪ್ರಿಲ್ 6ರ ತನಕ ವಿಜೃಂಭಣೆಯಿಂದ ನಡೆಯಿತು.

ಏ.6 ಆದಿತ್ಯವಾರ ಪುಣ್ಯಾಹ, ಜೀರ್ಣಅಷ್ಟಬಂಧ ಲೇಪನ ಪ್ರಧಾನ ಹೋಮ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಸಂದರ್ಶನ ಸೇವೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.

ಏ.4 ಶುಕ್ರವಾರ ಸಂಜೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತ್ತು. ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಸ್ಥಾನಶುದ್ಧಿ, ಪ್ರಾಸಾದಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ಬಲಿಪೂಜೆ ಶುಕ್ರವಾರ ನಡೆಯಿತು. ಏ.5 ಶನಿವಾರ ಬೆಳಿಗ್ಗೆ ಪುಣ್ಯಾಹ, ಗಣಯಾಗ, ಶಾಂತಿಹೋಮ, ಕಲಾಭಿವೃದ್ಧಿ, ತತ್ವಹೋಮ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಂಡಲ ರಚನೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಪುಣ್ಯಾಹ, ಮಂಟಪ ಸಂಸ್ಕಾರ, ಬ್ರಹ್ಮಕಲಶ ಸ್ಥಾಪನೆ, ಮಹಾಪೂಜೆ ನಡೆಯಿತು. ಸಂಜೆ 5 ಗಂಟೆಯಿಂದ ಸಂಜೆ 7 ಗಂಟೆಯ ತನಕ ಆಹ್ವಾನಿತ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಶ್ರೀ ಕ್ಷೇತ್ರ ಗುಡ್ಡಮ್ಮಾಡಿ ಇದರ ಅನುವಂಶಿಕ ಮೊಕ್ತೇಸರರಾದ ಬಿ.ಅರುಣ ಕುಮಾರ ಶೆಟ್ಟಿ, ಉತ್ಸವ ಸಮಿತಿ ಗೌರವಾಧ್ಯಕ್ಷರಾದ ಅಭಿನಂದನ ಎ.ಶೆಟ್ಟಿ, ಉತ್ಸವ ಸಮಿತಿ ಅಧ್ಯಕ್ಷರಾದ ವೆಂಕಟೇಶ ಮಂಜರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!