spot_img
Thursday, April 2, 2026
spot_img

ಬೈಂದೂರು: ಮಧುಮೇಹದ ಬಗ್ಗೆ ಮಾಹಿತಿ ಕಾರ್ಯಾಗಾರ

ಬೈಂದೂರು: ರೋಟರಿ ಕ್ಲಬ್ ಬೈಂದೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಬುಧವಾರ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಶಾ ಕಾರ್ಯಕರ್ತರಿಗೆ ಹಮ್ಮಿಕೊಂಡ ಮಧುಮೇಹದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಕೆ. ಅವರು ಮಾತನಾಡಿ, ಉತ್ತಮ ಆರೋಗ್ಯ ಹೊಂದುವುದು ಬಹುಮುಖ್ಯ. ಡಯಾಬಿಟಿಸ್ ಬಗ್ಗೆ ಹಲವರಲ್ಲಿ ತಪ್ಪು ಮಾಹಿತಿಗಳಿವೆ. ಈ ಬಗ್ಗೆ ಸರಿಯಾಗಿ ಅರಿತುಕೊಳ್ಳುವುದು ಮತ್ತು ಸರಿಯಾದ ಆಹಾರ ಕ್ರಮವನ್ನು ಅನುಸರಿಸುವುದರಿಂದ ಡಯಾಬಿಟಿಸ್ನಿಂದ ಅಂತರ ಸಾಧ್ಯವಿದೆ. ಸಾರ್ವಜನಿರಿಗೆ ಇದರ ಅರಿವು ಮೂಡಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರು ನಿಯಮಿತವಾಗಿ ಮಾಡಬೇಕಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ ಉಡುಪಿ ಬಿಗ್ ಮೆಡಿಕಲ್ ಸೆಂಟರ್ನ ವೈದ್ಯೆ, ಖ್ಯಾತ ಮಧುಮೇಹ ತಜ್ಞೆ ಡಾ. ಶ್ರುತಿ ಬಲ್ಲಾಳ್ ಅವರು ಮಧುಮೇಹಕ್ಕೆ ಕಾರಣ, ನಿಯಂತ್ರಣ ಹಾಗೂ ಉತ್ತಮ ಆಹಾರ ಕ್ರಮಗಳನ್ನು ಅನುಸರಿಸುವಿಕೆ ಮೊದಲಾದ ವಿಷಯಗಳ ಕುರಿತಾಗಿ ಮಾಹಿತಿ ನೀಡಿದರು.

ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇಳೆ ರೋಟರಿ ಕಾರ್ಯದರ್ಶಿ ಸುನಿಲ್ ಬೈಂದೂರು, ಸದಸ್ಯರಾದ ಐ. ನಾರಾಯಣ್, ಉದಯ್ ಆಚಾರ್, ಶಾರದಾ ನಾರಾಯಣ್ ಉಪಸ್ಥಿತರಿದ್ದರು.

ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಹೇಮಾ ಈಶ್ವರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!