spot_img
Sunday, May 17, 2026
spot_img

ಸಕ್ಕರೆ ಕಾರ್ಖಾನೆ ಹಗರಣ : ವಿಧಾನಸಭೆ ಸಭಾಪತಿ ಯು.ಟಿ ಖಾದರ್‌ ಭೇಟಿ

ಜನಪ್ರತಿನಿಧಿ (ಉಡುಪಿ/ಬ್ರಹ್ಮಾವರ) : ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯ ವಿಳಂಬ ನೀತಿಯ ವಿರುದ್ಧ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ೪೫ನೇ ದಿನದ ಅಹೋರಾತ್ರಿ ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ಕರ್ನಾಟಕ ವಿಧಾನಸಭಾ ಸಭಾಪತಿ ಯು. ಟಿ ಖಾದರ್‌ ಬೇಟಿ ನೀಡಿದ್ದಾರೆ.

ರೈತ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಯು.ಟಿ ಖಾದರ್‌, ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಹಗರಣದ ಬಗ್ಗೆ ತಿಳಿದುಕೊಂಡೇ ಇಲ್ಲಿಗೆ ಬಂದಿದ್ದೇನೆ. ಸಾರ್ವಜನಿಕರ ಆಸ್ತಿಯನ್ನು ಮಾರಿ ಹಣ ಲೂಟಿ ಮಾಡಿರುವುದು ಅಕ್ಷಮ್ಯ ಅಪರಾಧ. ರೈತ ಸಂಘದ ನ್ಯಾಯಯುತವಾದ ಬೇಡಿಕೆಗೆ ಖಂಡಿತ ಸರ್ಕಾರ ನ್ಯಾಯ ಒದಗಿಸಿ ಕೊಡುತ್ತದೆ ಎಂಬ ನಂಬಿಕೆ ಈ ಸರ್ಕಾರದ ಮೇಲಿದೆ ಎಂದು ಅವರು ಹೇಳಿದರು.

ಸಂಬಂಧಪಟ್ಟ ಸಹಕಾರಿ ಇಲಾಖೆಯ ಸಚಿವರೊಂದಿಗೆ ಈ ಸಂಬಂಧಿಸಿದಂತೆ ಅತಿ ಶೀಘ್ರದಲ್ಲಿ ಮಾತನಾಡಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸುವಂತೆ ವಿನಂತಿಸುವೆ. ಯಾವುದೇ ಕಾರಣದಲ್ಲೂ ಈ ಹಗರಣದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸುವುದಕ್ಕೆ ಬಿಡುವುದಿಲ್ಲ. ಸರ್ಕಾರದ ಮೇಲೆ ನಂಬಿಕೆ ಇದೆ. ಸಾರ್ವಜನಿಕರ ಹಣ ನುಂಗಿದವರಿಗೆ ಶಿಕ್ಷೆಯಾಗಲೇ ಬೇಕು. ನಾನು ನನ್ನಿಂದ ಆಗುವ ಎಲ್ಲಾ ಸಾಧ್ಯತೆಗಳನ್ನು ಮಾಡುವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಕಾಂಗ್ರೆಸ್‌ ಮುಖಂಡರಾ ಪ್ರಸಾದ್‌ ಕಾಂಚನ್, ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ, ದಿನೇಶ್‌ ಹೆಗ್ಡೆ ಮೊಳಹಳ್ಳಿ ಸೇರಿ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!