spot_img
Monday, February 16, 2026
spot_img

ಏ.8 -9: ನಂದಗೋಕುಲ ರಂಗ ಶಾಲೆ ಅರೆಹೊಳೆ: ವಾರ್ಷಿಕೋತ್ಸವ

ಕುಂದಾಪುರ: ನಂದಗೋಕುಲ ರಂಗ ಶಾಲೆ ಅರೆಹೊಳೆ ನಾವುಂದ ಹಾಗೂ ಹೆರಂಜಾಲು ಶಾಲೆಯ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಏಪ್ರಿಲ್ 8 ಹಾಗೂ 9 ರಂದು ಪ್ರತಿದಿನ ಸಂಜೆ 5 ಗಂಟೆಗೆ ಡಾ.ಹಂದಟ್ಟು ಹರೀಶ ಹಂದೆ ರಂಗ ಮಂದಿರ ಅರೆಹೊಳೆಯಲ್ಲಿ ನಡೆಯಲಿದೆ.

ಏ.8 ಮಂಗಳವಾರ ನೃತ್ಯವರ್ಷಾ ಹಾಗೂ ಅರೆಹೊಳೆ ಗಣಪಯ್ಯ ಸ್ಮಾರಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ನಿವೃತ್ತ ಉಪನ್ಯಾಸಕ ಎಸ್.ಜನಾರ್ದನ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಸಂದರ್ಭದಲ್ಲಿ ಹೊನ್ನಾವರ ಎಸ್.ಡಿ.ಎಂ ಕಾಲೇಜು ನಿವೃತ್ತ ಪ್ರಾಧ್ಯಾಪಕರಾದ ಕೊಡೇರಿ ವಾಸುದೇವ ಕಾರಂತ್, ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಡಾ.ಗೋವಿಂದ ಬಾಬು ಪೂಜಾರಿ, ಖಂಬದಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಜನಪ್ರತಿನಿಧಿ ಪತ್ರಿಕೆಯ ಸಂಪಾದಕ ಸುಬ್ರಹ್ಮಣ್ಯ ಪಡುಕೋಣೆ, ಅರೆಹೊಳೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜು ಬಿ.ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 5 ಗಂಟೆಗೆ ಶಾಲಾ ವಿದ್ಯಾರ್ಥಿಗಳಿಂದ ನೃತ್ಯವರ್ಷಾ ನಡೆಯಲಿದೆ.

ಏ.9 ಬುಧವಾರ ಯಕ್ಷವರ್ಷಾ ಹಾಗೂ ಸುಮಕೃಷ್ಣ ಯಕ್ಷಗಾನ ಪುರಸ್ಕಾರ ಪ್ರದಾನ ನಡೆಯಲಿದ್ದು, ಯಕ್ಷಗಾನ ಕಲಾವಿದ ಉಳ್ಳೂರು ಶಂಕರ ದೇವಾಡಿಗ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯ ಅತಿಥಿಗಳಾಗಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾಸಹಕಾರಿ ಸಂಘದ ಅಧ್ಯಕ್ಷರಾದ ಜಗದೀಶ್ ಪೂಜಾರಿ ಹಕ್ಕಾಡಿ, ಅರೆಹೊಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅಶೋಕ್ ಎನ್.ಶೆಟ್ಟಿ, ಯಕ್ಷಗಾನ ಗುರುಗಳಾದ ಹೆಮ್ಮಾಡಿ ರಾಮಚಂದ್ರ ಭಟ್ ಭಾಗವಹಿಸಲಿದ್ದಾರೆ.
ಸಂಜೆ 6.30ರಿಂದ ಯಕ್ಷಗಾನ ವಿದ್ಯಾರ್ಥಿಗಳಿಂದ ಮಧುರಾ ಮಹೇಂದ್ರ ಯಕ್ಷಗಾನ ಪ್ರದರ್ಶನ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!