spot_img
Wednesday, April 1, 2026
spot_img

ವಂಡ್ಸೆ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ

ಕುಂದಾಪುರ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಮಂಗಳವಾರ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎಫ್.ಎಸ್.ಎಲ್. ಇಂಡಿಯಾದ ಮೂಲಕ ಸೇವೆ ಸಲ್ಲಿಸಿದ ಜರ್ಮನ್ ವಿದ್ಯಾರ್ಥಿಗಳಾದ ಯನ್ ಮತ್ತು ಥಿಯೋ ಅವರನ್ನು ಸನ್ಮಾನಿಸಲಾಯಿತು.

ಯನ್ ಮತ್ತು ಥಿಯೋ ವಂಡ್ಸೆ ಶಾಲೆಯಲ್ಲಿ ಸ್ವಯಂಸೇವಕರಾಗಿ ವಿದ್ಯಾರ್ಥಿಗಳೊಂದಿಗೆ ಕಳೆದ ಕ್ಷಣಗಳನ್ನು ಕನ್ನಡದಲ್ಲಿಯೇ ಸ್ಮರಿಸಿಕೊಂಡರು. ಭಾರತ ದೇಶದ ಈ ಶಾಲೆಯ ಮೂಲಕ ಸಾಕಷ್ಟು ಕಲಿತಿದ್ದೇವೆ ಎಂದರು.

ಪ್ರಭಾರ ಮುಖ್ಯೋಪಾಧ್ಯಾಯರಾದ ಸದಾಶಿವ ಅವರು ಮಕ್ಕಳ ಕಲಿಕೆ, ರಜೆ ಅವಧಿಯಲ್ಲಿ ಮಕ್ಕಳ ಬಗ್ಗೆ ಪೋಷಕರು ವಹಿಸಬೇಕಾದ ಕಾಳಜಿ ಬಗ್ಗೆ ಮಾಹಿತಿ ನೀಡಿದರು. ನೂತನ ಪ್ರಭಾರ ಮುಖ್ಯೋಪಾಧ್ಯಾಯರಾದ ಸೋಮರಾಯ ಜನ್ನು, ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ವಿದ್ಯಾರ್ಥಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದ ಅನುಭವ ಅನುಭವ ಹಂಚಿಕೊಂಡರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜು, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!