spot_img
Wednesday, April 1, 2026
spot_img

ಆತ್ರಾಡಿ ವಿ‌ಎಂಕೆಯಲ್ಲಿ ಪೋಷಕರ-ಶಿಕ್ಷಕರ ಸಮ್ಮೀಲನ

ವಂಡ್ಸೆ: ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ-ವಂಡ್ಸೆ ಇಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಪೋಷಕರ-ಶಿಕ್ಷಕರ ಸಮ್ಮೀಲನ ಕಾರ್ಯಕ್ರಮ ಏ.7ರಂದು ವಿ.ಎಂ.ಕೆ ಸಂಸ್ಥೆಯ ಸಂಜೀವಿ ಭಾಸ್ಕರ ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.

ಆಲೂರು ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಹರ್ಕೂರು ಮಂಜಯ್ಯ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ದಿನಕರ ಆರ್.ಶೆಟ್ಟಿ ಬಸ್ರೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಎಸ್.ಎಸ್.ಎಲ್.ಸಿ ಬಳಿಕ ಪದವಿಪೂರ್ವ ಶಿಕ್ಷಣದಲ್ಲಿ ವಿಷಯ ಆಯ್ಕೆ ಹಾಗೂ ಕಾಲೇಜು ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಎದುರಿಸುವ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಮಾತನಾಡಿದರು.

ನಿವೃತ್ತ ಶಿಕ್ಷಕಿ ವಿನಯ ಶೆಣೈ ವಿದ್ಯಾರ್ಥಿನಿಯರ ಮುಂದಿನ ಶಿಕ್ಷಣ-ಸವಾಲುಗಳ ಬಗ್ಗೆ ಮಾತನಾಡಿದರು. ಸಂಸ್ಥೆಯ ಸಂಚಾಲಕರಾದ ಸುಭಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಸುಭಾಸ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. 10ನೇ ತರಗತಿ ವಿದ್ಯಾರ್ಥಿನಿಯರಾದ ತ್ರಿಶಾ ಮತ್ತು ನಿಶ್ಮಿತಾ ಕಾರ್ಯಕ್ರಮ ನಿರ್ವಹಿಸಿದರು. ಸಂಚಿತಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!