spot_img
Tuesday, March 17, 2026
spot_img

ಅಂಪಾರು: ಶರಾಬು ಕುಡಿಯಲು ಹಣವಿಲ್ಲದೆ ಯುವಕ ನೇಣು ಬಿಗಿದು ಆತ್ಮಹತ್ಯೆ

ಶಂಕರನಾರಾಯಣ: ಶರಾಬು ಕುಡಿಯಲು ಹಣವಿಲ್ಲದೆ ಯುವಕನೋರ್ವ ಅದೇ ಚಿಂತೆಯಲ್ಲಿ ಮನೆಯ ಜಂತಿಗೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಪಾರು ಗ್ರಾಮದಲ್ಲಿ ನಡೆದಿದೆ.

ಸುಬ್ರಹ್ಮಣ್ಯ (33ವ) ಆತ್ಮಹತ್ಯೆಗೆ ಶರಣಾದ ಯುವಕ. ಸುಬ್ರಹ್ಮಣ್ಯ ಮನೆಯಲ್ಲಿಯೇ ಇರುತ್ತಿದ್ದು, ಅಪರೂಪಕ್ಕೊಮ್ಮೆ ಬದಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಶರಾಬು ಸೇವನೆಯ ವ್ಯಸನ ಹೊಂದಿದ್ದರು. ಆತನ ಕುಡಿತ ಬಿಡಿಸಲು ಹಲವಾರು ಬಾರಿ ಮದ್ಯವರ್ಜನ ಶಿಬಿರಕ್ಕೆ ಸೇರಿಸಿದ್ದು, ಆದರೂ ಆತನು ವಿಪರೀತ ಶರಾಬು ಕುಡಿಯುತ್ತಿದ್ದು, ಕುಡಿಯಬಾರದಾಗಿ ಎಷ್ಟು ಸಲ ಬುದ್ದಿ ಹೇಳಿದರೂ ಆತನು ಮನೆಯಲ್ಲಿ ಯಾರ ಮಾತನ್ನು ಕೇಳುತ್ತಿರಲಿಲ್ಲ, ಹೀಗಿರುವಾಗ ಸುಬ್ರಹ್ಮಣ್ಯನು ಶರಾಬು ಕುಡಿಯಲು ಹಣ ಇಲ್ಲದೇ ಇದ್ದುದರಿಂದ ಅದೇ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ ಏ.9-2025 ರಂದು ಸಂಜೆ ಮನೆಯ ಮಾಡಿನ ಜಂತಿಗೆ ಲುಂಗಿಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!