spot_img
Wednesday, April 1, 2026
spot_img

ಬೆಲೆ ಏರಿಕೆ : ಕೇಂದ್ರ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರಿಂದ ಪ್ರತಿಭಟನೆ

ಜನಪ್ರತಿನಿಧಿ (ಉಡುಪಿ) : ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಏರಿಸುವ ಮೂಲಕ ಬಡವರಿಗೆ, ಮಹಿಳೆಯರಿಗೆ ವಂಚಿಸಿದೆ. ಅಚ್ಚೇ ದಿನ್‌ ಬರುವುದಾಗಿ ಹೇಳಿ ಜನರಿಗೆ ಟೋಪಿ ಹಾಕುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರ್ಕಾರ ಅಡುಗೆ ಅನಿಲ ಹಾಗೂ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಉಡುಪಿಯ ಬ್ರಹ್ಮಗಿರಿ ವೃತ್ತದ ಬಳಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ ವತಿಯಿಂದ ನಿನ್ನೆ(ಶುಕ್ರವಾರ) ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹೊರೆಯಿಂದ ಮಧ್ಯಮ ವರ್ಗದ ಕುಟುಂಬಗಳು ಹೇಗೆ ಜೀವನ ನಿರ್ವಹಿಸಬೇಕು, ರಾಜ್ಯದಲ್ಲಿ ಜನಾಕ್ರೋಶ ಯಾತ್ರೆ ನಡೆಸಲು ಬಿಜೆಪಿಗೆ ನೈತಿಕತೆ ಇದೆಯೇ ಎಂದು ಅವರು ಪ್ರಶ್ನಿಸಿದರು. ಬಿಜೆಪಿ ಜಾತಿ ಹಾಗೂ ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜನೆ ಮಾಡುತ್ತಿದೆ. ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ ಎಂದು ಅವರು ಆರೋಪಿಸಿದರು.

ಇಂದು ಸಾಂಕೇತಿಕವಾಗಿ ಪ್ರತಿಭಟಿಸಿದ್ದೇವೆ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು. ಕಾಂಗ್ರೆಸ್‌ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಗೀತಾ ವಾಗ್ಲೆ, ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್‌ ಕಾಂಚನ್‌, ಕಾಂಗ್ರೆಸ್‌ ಮುಖಂಡರಾದ ಪ್ರಸಾದ್‌ ರಾಜ್‌ ಕಾಂಚನ್, ವೆರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್‌ ಸೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕಾಂಗ್ರೆಸ್‌ ಗ್ಯಾರಂಟಿಯಿಂದ ಮಹಿಳೆಯರಲ್ಲಿ ನಗು

ಮಹಿಳೆಯರು ಸ್ವತಂತ್ರವಾಗಿ ಹಾಗೂ ಸ್ವಾವಲಂಬಿಯಾಗಿ ಬದುಕಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಜಾರಿಗೆ ತಂದಿರುವ ಗ್ಯಾರಂಟಿಗಳು ನಿಜವಾಗಿಯೂ ಜನರನ್ನು ತಲುಪುತ್ತಿವೆ. ಇವುಗಳಿಂದ ಮಹಿಳೆಯು ಬಹಳಷ್ಟು ಪ್ರಯೋಜನ ಪಡೆದುಕೊಂಡಿದ್ದಾರೆ. ಮಹಿಳೆಯರ ಮುಖದಲ್ಲಿ ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ನಗು ಬಂದಿದೆ ಎಂದು ಸೌಮ್ಯ ರೆಡ್ಡಿ ಹೇಳಿದರು.

ಪ್ರತಿಭಟನೆಯ ಬಳಿಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಕಾಂಗ್ರೆಸ್‌ ನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ʼಬಿಜೆಪಿಗೆ ಮಹಿಳೆಯ ಬಗ್ಗೆ ಕಾಳಜಿ ಇಲ್ಲ. ಅವಕಾಶ ಸಿಕ್ಕಾಗ ಅವರು ಏನನ್ನೂ ಮಾಡಲಿಲ್ಲ. ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದೆ.

ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಮಾತನಾಡಿ, ಮಹಾತ್ಮ ಗಾಂಧಿ ಅವರು ಮಹಿಳೆಯರು ಪುರುಷರಿಗೆ ಸಮಾನವಾಗಿ ನಿಲ್ಲಬೇಕೆಂದು ಕನಸು ಕಂಡಿದ್ದರು. ಆದರೇ, ಸಮಾಜವು ಮಹಿಳೆಯರನ್ನು ಕೇವಲ ಮನೆಗೆ ಸೀಮಿತವೆಂದು ನೋಡುತ್ತಿದೆ. ಮಹಿಳೆಯರನ್ನು ಸಬಲೀಕರಣಗೊಳಿಸುವ ಏಕೈಕ ಪಕ್ಷ ಕಾಂಗ್ರೆಸ್‌ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!