spot_img
Wednesday, April 1, 2026
spot_img

ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನ: ವಿಜೃಂಭಣೆಯ ಬ್ರಹ್ಮರಥೋತ್ಸವ

ಜನಪ್ರತಿನಿಧಿ ವಾರ್ತೆ] ಏ.12, ಕುಂದಾಪುರ: ಕುಂದಾಪುರ: ಪುರಾಣ ಪ್ರಸಿದ್ಧ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವದ ಶನಿವಾರ ಚಿತ್ರಪೂರ್ಣಿಮೆಯ ಶುಭಮುಹೂರ್ತದಲ್ಲಿ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತಸಂದೋಹ ಮಹಿಷಾಸುರಮರ್ದಿನಿ ರಥ ಏರಿ, ರಥದಲ್ಲಿ ಗಮಿಸುವ ದಿವ್ಯ ಸೊಬಗನ್ನು ಕಣ್ತುಂಬಿಸಿಕೊಂಡರು.

ಬೆಳಿಗ್ಗೆಯಿಂದಲೇ ದೊಡ್ಡ ಸಂಖ್ಯೆಯಲ್ಲಿ ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುತ್ತಿರುವುದು ಕಂಡು ಬಂತು. ಕಲಶ ಸ್ಥಾಪನೆ, ಪ್ರಧಾನಾಧಿವಾಸ ಹೋಮ, ಕಲಶಾಭಿಷೇಕ, ರಥಶುದ್ಧಿ, ಉತ್ಸವ ಬಲಿ ಮೊದಲಾದ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಾಮೂಹಿಕ ಕುಂಕುಮಾರ್ಚನೆ:
ರಥೋತ್ಸವದ ಬೆಳಿಗ್ಗೆಯಿಂದ ಏಕಕಾಲದಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು. ಒಂದು ಸಾವಿರಕ್ಕೂ ಮಿಕ್ಕಿ ಮಹಿಳೆಯರು ಸಾಮೂಹಿಕ ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡರು.

ಮನೆಮನೆಯಿಂದ ಹಣ್ಣುಕಾಯಿ:
ಈ ಬಾರಿ ವಿಶೇಷವಾಗಿ ಶ್ರೀಮಹಿಷಾಸುರಮರ್ದಿನಿ ದೇವಿಗೆ ಮನೆಮನೆಯಿಂದ ಹಣ್ಣುಕಾಯಿ ಸೇವೆ ಸಮರ್ಪಣೆ ಬಗ್ವಾಡಿ ಹೋಬಳಿಯ ಸರ್ವ ಮೊಗವೀರರು, ಗ್ರಾಮಸ್ಥರು ತಮ್ಮ ತಮ್ಮ ಮನೆಯಿಂದ ಒಂದೊಂದು ಹಣ್ಣುಕಾಯಿ ಸೇವೆಯನ್ನು ಸಲ್ಲಿಸಿದರು. ಸರದಿ ಸಾಲಿನಲ್ಲಿ ನಿಂತು ಭಕ್ತಾದಿಗಳು ಹಣ್ಣುಕಾಯಿ ಸಲ್ಲಿಸಿದರು.

ಭಜನಾ ಕಾರ್ಯಕ್ರಮ:
ಸಾಮೂಹಿಕ ಕುಂಕುಮಾರ್ಚನೆಯ ಮುಕ್ತಾಯದ ಬಳಿಕ ಪ್ರಧಾನ ವೇದಿಕೆಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಗೌರವಾರ್ಪಣೆ ನಡೆಯಿತು. ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ನೃತ್ಯ ಸಿಂಚನ ಹಾಗೂ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ವೈಭವ ನಡೆಯಿತು.
ಈ ರಥೋತ್ಸವದ ವಿಶೇಷವಾಗಿ ದೇವಸ್ಥಾನ ಎದುರಿನ ಶಿಲೆಯ ಧ್ವಜಸ್ತಂಭಕ್ಕೆ ತಾಮ್ರ ಹಾಗೂ ಹಿತ್ತಾಳೆಯ ಹೊದಿಕೆ ಮಾಡಲಾಗಿತ್ತು. ದೇವಿಗೆ ಬೆಳ್ಳಿಯ ಪೀಠ ಸಮರ್ಪಿಸಲಾಗಿತ್ತು. ರಾಜ ರಾಣಿ ಹೊಸ ತಟ್ಟಿರಾಯಗಳು ಈ ವರ್ಷದ ವಿಶೇಷ ಅತಿಥಿಗಳು.

ಈ ಸಂದರ್ಭದಲ್ಲಿ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ಡಾ.ಜಿ.ಶಂಕರ್, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ.ಕುಂದರ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ, ಮಾಜಿ ಅಧ್ಯಕ್ಷರಾದ ಕರುಣಾಕರ ಜಿ.ಪುತ್ರನ್, ರಮೇಶ ಬಂಗೇರ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮಾಜಿ ಅಧ್ಯಕ್ಷರಾದ ಕೆ.ಕೆ ಕಾಂಚನ್, ಎಂ.ಎಂ.ಸುವರ್ಣ, ಹಿರಿಯಣ್ಣ ಚಾತ್ರಬೆಟ್ಟು, ಶಿವರಾಮ ಪುತ್ರನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಕಾರ್ಯದರ್ಶಿ ಗಣೇಶ ಮೆಂಡನ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಕೋಡಿ, ಮಾಜಿ ಅಧ್ಯಕ್ಷ ರಾಜೇಂದ್ರ ಹಿರಿಯಡಕ, ಡಾ.ಉಮೇಶ ಪುತ್ರನ್, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಮೊಗವೀರ ಮಹಾಜನ ಸೇವಾ ಸಂಘದ ಉಪಾಧ್ಯಕ್ಷರಾದ ಸದಾನಂದ ಬಳ್ಕೂರು, ಕೋಶಾಧಿಕಾರಿ ಸತೀಶ್ ಎಂ ನಾಯ್ಕ್, ನಾಗೇಶ ಕಾಂಚನ್, ಗಣಪತಿ ಟಿ ಶ್ರೀಯಾನ್, ಹೆಮ್ಮಾಡಿ ಘಟಕದ ಅಧ್ಯಕ್ಷ ದಿನೇಶ ಕಾಂಚನ್ ಬಾಳಿಕೆರೆ, ಬೈಂದೂರು ಘಟಕದ ಅಧ್ಯಕ್ಷ ಸೋಮಶೇಖರ, ಕುಂದಾಪುರ ಘಟಕದ ಅಧ್ಯಕ್ಷ ನಾಗೇಶ ಹಳ್ನಾಡು, ಹಾಲಾಡಿ ಶಂಕರನಾರಾಯಣ ಘಟಕದ ಅಧ್ಯಕ್ಷ ರಾಘವೇಂದ್ರ, ಕೋಟೇಶ್ವರ ಘಟಕದ ಅಧ್ಯಕ್ಷ ನಾಗರಾಜ ಬೀಜಾಡಿ, ಕೋಟೇಶ್ವರ ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮಾರ್ಕೋಡು, ಬಗ್ವಾಡಿ ಹೋಬಳಿ ಮೊಗವೀರ ಸ್ತ್ರೀಶಕ್ತಿ ಅಧ್ಯಕ್ಷೆ ಶ್ಯಾಮಲ ಜಿ.ಚಂದನ್, ಎಲ್ಲಾ ಕೂಡಿಗೆಯ ಗುರಿಕಾರರು ಉಪಸ್ಥಿತರಿದ್ದರು.

ಏ.೧೦ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಪ್ರಧಾನ ತಂತ್ರಿಗಳಾಗಿ ದಿ.ವಿದ್ವಾನ್ ಚಂದ್ರಶೇಖರ ಸೋಮಯಾಜಿಯವರ ಪುತ್ರರು, ಪ್ರಧಾನ ಅರ್ಚಕರಾಗಿ ಗಿರೀಶ್ ಭಟ್ ಬಗ್ವಾಡಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಸಂಜೆ ನಡೆದ ರಥೋತ್ಸವದಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು. ಬಳಿಕ ಬಗ್ವಾಡಿ ಉತ್ಸವ ಅದ್ದೂರಿಯಾಗಿ ಸಂಪನ್ನಗೊಂಡಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!