spot_img
Wednesday, April 1, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗ: ಸಿ‌ಎ, ಸಿ‌ಎಸ್, ಸಿ‌ಎಂಎ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿ‌ಎ/ಸಿ‌ಎಸ್/ಸಿ‌ಎಮ್‌ಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶ್ರೀಮತಿ ಶೈಲಜಾ ಕೃಷ್ಣಾನಂದ ಇವರು ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎನ್ನುವುದರ ಕುರಿತು ಅರಿವು ಮೂಡಿಸಿದರು. ಇದೇ ಸಂದರ್ಭ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಜೀವನ ಪದ್ಧತಿ ಇರಬೇಕು ಅದರಲ್ಲಿ ಅಗ್ರಸ್ಥಾನದಲ್ಲಿ ಈ ಪ್ರಾಣಾಯಾಮ, ಆಸನ, ಮುದ್ರೆಗಳ ಬಳಕೆ ಬಹಳ ಪರಿಣಾಮಕಾರಿ ಎಂದು ಶುಭಾಶಂಸನೆ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ವಿ ಭಟ್ ಹಾಗೂ ಕಾರ್ಯಕ್ರಮ ಸಂಯೋಜಕರಾದ ಸುಹಾಸ್ ಜಟ್ಟಿಮನೆ ಮತ್ತು ಶ್ವೇತ ಭಂಡಾರಿ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಕಾಲೇಜಿನ ತೃತೀಯ ಬಿ.ಕಾಂ.ನ ವಿದ್ಯಾರ್ಥಿನಿ ಪವಿತ್ರ ಪೈ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!