spot_img
Tuesday, March 31, 2026
spot_img

ಮಂಗಳೂರು – ಉಡುಪಿ ನಡುವೆ ಮೆಟ್ರೋ | ಕಾರ್ಯಸಾಧ್ಯತೆಯ ವರದಿ ಸಲ್ಲಿಸಲು ಸೂಚನೆ

ಜನಪ್ರತಿನಿಧಿ (ಮಂಗಳೂರು) : ಮಹತ್ವದ ಬೆಳವಣಿಗೆಯಲ್ಲಿ ಮಂಗಳೂರು–ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಆರಂಭಿಸುವ ಕುರಿತು ಕಾರ್ಯಸಾಧ್ಯತೆಯ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ.

ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.

ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ ವರದಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

ಅಲ್ಲದೆ ವಾಣಿಜ್ಯ ನಗರವಾಗಿರುವ ಮಂಗಳೂರಿನಲ್ಲಿ ಇರುವ ಸೌಲಭ್ಯ, ವೈದ್ಯಕೀಯ ಸೌಲಭ್ಯ, ಶಿಕ್ಷಣ ಸಂಸ್ಥೆಗಳು, ಕಡಲ ಕಿನಾರೆ ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಮೆಟ್ರೊ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸಚಿವರು ತಿಳಿಸಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ಪತ್ರವನ್ನು ಜಿಲ್ಲಾಧಿಕಾರಿ ಪರವಾಗಿ ನಗರಾಭಿವೃದ್ಧಿ ಕೋಶವು, ಎನ್‌ಎಂಪಿಎ, ಎಂಆರ್‌ಪಿಎಲ್, ನಗರ ಪೊಲೀಸ್ ಕಮಿಷನರ್, ಎನ್‌ಐಟಿಕೆ, ಡಿಎಫ್‌ಒ, ಸಾರಿಗೆ ಇಲಾಖೆ, ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಇಲಾಖೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯನಿರ್ವಹಣಾಧಿಕಾರಿ, ಕೆನರಾ ವಾಣಿಜ್ಯೋದ್ಯಮ ಕೈಗಾರಿಕಾ ಸಂಘಕ್ಕೆ ಕಳುಹಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!