spot_img
Thursday, April 2, 2026
spot_img

ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ : ಡಿ ಕೆ ಶಿವಕುಮಾರ್‌

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ಭಾವೈಕ್ಯತೆಯ ದೊಡ್ಡ ಸಂಕೇತ. ಕರಗ ಆಚರಣೆ ವೇಳೆ ದರ್ಗಾಕ್ಕೂ ಭೇಟಿ ನೀಡಲಾಗುತ್ತದೆ. ಧರ್ಮ, ದೇವಾಸ್ಥಾನದ ಹೆಸರಿನಲ್ಲಿ ರಾಜಕಾರಣ ಮಾಡುವುದು ನೀಚತನ. ಇದನ್ನು ಯಾರೂ ಸಹ ಮಾಡಬಾರದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿವಹಿಸಿದ್ದೇವೆ. ಅವರು ಯಾರಿಗೆ ಹಣ ನೀಡಬೇಕೋ ಅವರಿಗೆ ಹಣ ನೀಡುತ್ತಾರೆ. ಬಜೆಟ್ ಅಲ್ಲಿಯೇ ಹಣ ಮೀಲಿಟ್ಟಿದ್ದೇವೆ. ಕರಗ ಉತ್ಸವ ಚೆನ್ನಾಗಿ ನಡೆಯಲು ಜಿಲ್ಲಾಧಿಕಾರಿಗಳು, ಪೊಲೀಸರು ಶ್ರಮವಹಿಸಿದ್ದಾರೆ ಎಂದು ತಿಳಿಸಿದರು.

ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದು, ಅವರನ್ನು ನಾವು ಏಕೆ ಟೀಕೆ ಮಾಡಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರವಾಗಿ ಅವರುಗಳು ತಮ್ಮ ನಿಲುವುಗಳನ್ನು ಪ್ರತಿಪಾದನೆ ಮಾಡಲಿ ಎಂದು ಹೇಳಿದರು.

ಮುಖ್ಯಮಂತ್ರಿಗಳು ಜಾತಿಗಣತಿ ವರದಿಯ ಬಗ್ಗೆ ಚರ್ಚೆ ನಡೆಸಲು ಜನಪ್ರತಿನಿಧಿಗಳಿಗೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ‌ಮಾಡಲು ಸಾಧ್ಯ” ಎಂದರು. ಚುನಾವಣೆ ಪೂರ್ವದಲ್ಲಿ ಒಕ್ಕಲಿಗ ಸಮುದಾಯ ಬೆನ್ನಿಗೆ ನಿಲ್ಲಬೇಕು ಎಂದು ಈ ಹಿಂದೆ ನೀಡಿದ್ದ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದೇನೆ. ಎಲ್ಲರಿಗೂ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ, ಧ್ವನಿ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ ಸಹ” ಎಂದರು. ಒಕ್ಕಲಿಗರ ಸಂಖ್ಯೆ 61 ಲಕ್ಷ ತೋರಿಸಲಾಗುತ್ತಿದೆ ಎಂದು ಕೇಳಿದಾಗ, “ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಷ್ಟೇ” ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!