spot_img
Thursday, March 26, 2026
spot_img

ಮೂಡ್ಲಕಟ್ಟೆ ಐಎಂಜೆ ಪದವಿ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಸಂಭ್ರಮ

ಏಪ್ರಿಲ್11: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ವಾರ್ಷಿಕೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೋಟ ಪಡುಕೇರಿಯ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ನಾಯಕ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ ವಿದ್ಯಾರ್ಥಿಗಳು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು. ಸಜ್ಜನರ ಜೊತೆಗೆ ಹೆಚ್ಚಾಗಿ ಬೆರೆಯಬೇಕು ಎನ್ನುವುದನ್ನು ಮಹಾಭಾರತದ ಕೆಲವು ಸಾಂದರ್ಭಿಕ ಉದಾಹರಣೆಯೊಂದಿಗೆ ವಿವರಿಸಿದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು, ಅನೇಕ ಯೋಜನೆಗಳನ್ನು ಈ ವಿದ್ಯಾ ಸಂಸ್ಥೆ ಹಮ್ಮಿಕೊಂಡಿದೆ. ವಿದ್ಯಾರ್ಥಿಗಳ ಕೌಶಲ್ಯಕ್ಕೆ ಅನುಗುಣವಾದ ವಿದ್ಯಾಭ್ಯಾಸವನ್ನು ಆಯ್ಕೆ ಮಾಡಿಕೊಂಡು, ಯಶಸ್ವಿ ಬದುಕನ್ನ ತಮ್ಮದಾಗಿಸಿಕೊಳ್ಳಬೇಕೆಂದು ಶುಭಹಾರೈಸಿದರು. ಇದೆ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸಾವಿರಾರು ಜೀವ ರಕ್ಷಣೆ ಮಾಡಿರುವ ಶ್ರೀ ಈಶ್ವರ್ ಮಲ್ಪೆ ಅವರ ಕಾರ್ಯವನ್ನು ಗುರುತಿಸಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಈಶ್ವರ್ ಮಲ್ಪೆ ಅವರು ‘ಗುರು ಹಿರಿಯರಿಗೆ ಗೌರವ ನೀಡಿ ದೇವರ ಬಗ್ಗೆ ನಂಬಿಕೆ ಹೊಂದಿ ಸಂಸ್ಕಾರಯುತ ಜೀವನವನ್ನು ನಡೆಸಿ, ಬದುಕಿನಲ್ಲಿ ಬರುವ ಸಮಸ್ಯೆಗಳನ್ನು ಮೆಟ್ಟಿನಿಂತು ಜೀವನವನ್ನು ಎದುರಿಸಿ’ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಸಿದ್ಧಾರ್ಥ್ ಜೆ. ಶೆಟ್ಟಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ, ಉಪ ಪ್ರಾಂಶುಪಾಲರಾದ ಜಯಶೀಲ್ ಕುಮಾರ್ ಉಪಸ್ಥಿತರಿದ್ದರು. ಶೈಕ್ಷಣಿಕ, ಕ್ರೀಡೆ ಹಾಗು ಸಾಂಸ್ಕೃತಿಕ ವಿಭಾಗದಲ್ಲಿ ವಿಶೇಷ ಸಾಧನೆಗೈದ ಹಾಗು ಕಾಲೇಜಿಗೆ ವಿಶೇಷ ಕೊಡುಗೆ ನೀಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.

ಗಣಕಶಾಸ್ತ್ರ ಉಪನ್ಯಾಸಕಿ ಕು.ರಕ್ಷಿತಾ ಅಡಿಗ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ರಕ್ಷಾ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರೇವತಿ ಸನ್ಮಾನ ಪತ್ರವನ್ನು ವಾಚಿಸಿದರು. ಗಣಕಶಾಸ್ತ್ರ ಉಪನ್ಯಾಸಕಿ ಶ್ರೀಮತಿ ನಾಫಿಯ ಅಕ್ತಾರಿ ವಂದಿಸಿದರು. ಇಂಗ್ಲಿಷ್ ಉಪನ್ಯಾಸಕಿ ಕು.ರಾಜೇಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!