spot_img
Tuesday, March 17, 2026
spot_img

ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಆರ್.ಎಸ್.ಎಸ್ ಮತ್ತು ಬಿಜೆಪಿ ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿನಿಂತು, ಸತ್ಯ ಹೇಳುವ ಎದೆಗಾರಿಕೆಯನ್ನು ನಮ್ಮ ಪಕ್ಷದ ಕಾರ್ಯಕರ್ತರು ಬೆಳೆಸಿಕೊಳ್ಳಬೇಕು. ಕಾಂಗ್ರೆಸ್ ಕಾರ್ಯಕರ್ತರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು. ಕಾರಣ ಸೈದ್ಧಾಂತಿಕ ಹೋರಾಟವನ್ನು ನಾವು ನೀವೆಲ್ಲಾ ಈ ದೇಶದ ಭವಿಷ್ಯಕ್ಕಾಗಿ ಮುನ್ನಡೆಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ  ಆಯೋಜಿಸಿದ್ದ 134ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸಿದ್ದು, ಅಂಬೇಡ್ಕರ್ ಅವರು ಮನುಸ್ಮೃತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ? ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಜನರಿಗೆ, ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು. ಮನುಸ್ಮೃತಿ ಮತ್ತು ಜಾತಿ ವ್ಯವಸ್ಥೆ ಕಾರಣದಿಂದ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾಗಿದ್ದ ಎಲ್ಲಾ ಜಾತಿ, ಸಮುದಾಯಗಳನ್ನು ದೌರ್ಜನ್ಯಮುಕ್ತಗೊಳಿಸಲು ಅಂಬೇಡ್ಕರ್ ಅವರ ಬದುಕು ಮುಡಿಪಾಗಿತ್ತು.ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗಾಗಿ, ಅಸ್ಪೃಶ್ಯತೆ ಹೋಗಲಾಡಿಸುವುದಕ್ಕಾಗಿ ತಾನು ಶಿಕ್ಷಣ ಪಡೆದದ್ದಾಗಿ ಅಂಬೇಡ್ಕರ್ ಹೇಳಿದ ಮಾತು ಅವರ ಆಶಯ ಎಂಥದ್ದು ಎನ್ನುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

1952 ರ ಜನವರಿ 18 ರಂದು ಅಂಬೇಡ್ಕರ್ ಅವರು ತಮ್ಮ ಕೈಯಾರೆ ತಮ್ಮದೇ ಹಸ್ತಾಕ್ಷರದಲ್ಲಿ ಒಂದು ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಸ್ಪಷ್ಟವಾಗಿ ಬರೆದಿದ್ದಾರೆ. ಆದರೂ ಬಿಜೆಪಿಯವರು ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಕಾಂಗ್ರೆಸ್ ಎಂದು ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜನರಿಗೆ ಈ ಸತ್ಯ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು.‌ ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಸಮಾನವಾಗಿ ಕಾಣುವ ಎಲ್ಲರ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿ ಮಾಡಿರುವ ಚರಿತ್ರೆ ಮತ್ತು ವರ್ತಮಾನ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಅವರು ಅಭಿಪ್ರಾಯ ಪಟ್ಟರು.

ಬಿಜೆಪಿಯವರಿಗೆ ಸಾರ್ವಕರ್ ಮತ್ತು ಗಾಂಧಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನೀಡಿದ ಅಂಬೇಡ್ಕರ್ ಬೇಕು, ಇವರು ನಮಗೆ ಬೇಕು. ಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್ ಸ್ಥಾಪಿಸಲಾಗುವುದು ಮತ್ತು ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು.

ನಾವು ರಾಜ್ಯದಲ್ಲಿ ಜಾರಿಗೆ ತಂದಿರುವ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವೇ ನರೇಂದ್ರ ಮೋದಿ ಅವರೇ? ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!