spot_img
Monday, March 16, 2026
spot_img

ಜಮ್ಮು ಕಾಶ್ಮೀರ | ನಸುಕಿನ ಜಾವ ಪೂಂಚ್‌ ನಲ್ಲಿ ಗುಂಡಿನ ಚಕಮಕಿ : ಸೇನಾ ಸಿಬ್ಬಂದಿಗೆ ಗಾಯ

ಜನಪ್ರತಿನಿಧಿ (ಶ್ರೀನಗರ) : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಇಂದು (ಮಂಗಳವಾರ) ನಸುಕಿನ ಜಾವ ಗುಂಡಿನ ಚಕಮಕಿ ನಡೆದಿದೆ.

ಭಯೋತ್ಪಾದಕರ ಚಲನವಲನ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ನಿನ್ನೆ ಸೋಮವಾರ ರಾತ್ರಿ ಸುರಂಕೋಟ್‌ನ ಲಸಾನಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ರಾತ್ರಿ ಸುರಂಕೋಟ್‌ನ ಲಸಾನಾದಲ್ಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು.

ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಶೋಧ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ. ಗುಂಡಿನ ದಾಳಿಯಲ್ಲಿ ಒಬ್ಬ ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!