spot_img
Monday, March 16, 2026
spot_img

ಇದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಜಾತಿ ಗಣತಿ ಅಲ್ಲವೇ ಅಲ್ಲ : ಜಯಪ್ರಕಾಶ್‌ ಹೆಗ್ಡೆ

ಜನಪ್ರತಿನಿಧಿ (ಉಡುಪಿ) : ರಾಜ್ಯದಲ್ಲಿ ಎಷ್ಟು ಜಾತಿಗಳಿವೆಯೋ ಎಲ್ಲವನ್ನೂ ಜಾತಿ ಗಣತಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸಂಖ್ಯೆ ಎಷ್ಟು ಎಂದು ನಾನು ಈಗ ಹೇಳಲಾರೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಮಾಧ್ಯಮಗಳ ವರದಿಗಾರರಿಗೆ ಸ್ಪಂದಿಸಿದ ಅವರು, ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ ಆದ ಬಳಿಕ ಹೇಳಿಕೆ ನೀಡಬಃಉದು ಎಂದು ಅಂದುಕೊಂಡಿದ್ದೆ. ಆದರೇ, ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಗೊಂದಲ ಉಂಟಾಗಿರುವುದರಿಂದ ಸ್ಪಷ್ಟನೆ ನೀಡಬೇಕಾಗಿದೆ ಎಂದು ಅವರು ಹೇಳಿದರು.

ಇದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಜಾತಿ ಗಣತಿ ಅಲ್ಲವೇ ಅಲ್ಲ. ಮಾಡಿರುವ ಸಮೀಕ್ಷೆಯಲ್ಲಿ ಜಾತಿ ಒಂದು ಅಂಶ ಅಷ್ಟೇ. ಜನರು ಹೇಳಿರುವ ಜಾತಿಯನ್ನು ಬರೆದುಕೊಳ್ಳಲಾಗಿದೆ. ಜನರ ಜಾತಿಯನ್ನು ನಾವು ನಿರ್ಧರಿಸಲು ಸಾಧ್ಯವಿಲ್ಲ. ಮನೆಯವರು ಕೊಟ್ಟ ಜಾತಿಯನ್ನು ನಮೂದಿಸಲಾಗಿದೆ ಎಂದು ಅವರು ತಿಳಿಸಿದರು.

ವರದಿ ಸಾರ್ವಜನಿಕಗೊಂಡ ಬಳಿಕ ಚರ್ಚೆ ಮಾಡಬಹುದು. ವರದಿಯಲ್ಲಿ ತಪ್ಪಿದ್ದರೆ ಸರಿಪಡಿಸಿಕೊಳ್ಳುವುದಕ್ಕೂ ಅವಕಾಶವಿದೆ. ತಪ್ಪಾಗಿದ್ದರೆ ಸರಿ ಮಾಡುತ್ತೇವೆ ಎಂದು ಸರ್ಕಾರವೇ ತಿಳಿಸಿದೆ. ಶೇ.೯೫ರಷು ಸರಿ ಇದೆ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಏನನ್ನೂ ನೋಡದೆ ಇದು ವೈಜ್ಞಾನಿಕ ವರದಿ ಅಲ್ಲ ಎನ್ನಬಾರದು ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ವರದಿ ಬರೆಯಿಸಿದ್ದಾರೆ ಎನ್ನುವುದು ಸರಿಯಲ್ಲ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಯಾ ಜಿಲ್ಲಾಧಿಕಾರಿ ಸಮೀಕ್ಷೆ ನಡೆಸಿದ್ದಾರೆ. ತರಬೇತಿ ಪಡೆದ ಶಿಕ್ಷಕರು ಪ್ರತಿ ಹಳ್ಳಿಗೆ ಹೋಗಿ ಸಮೀಕ್ಷೆ ಮಾಡಿದ್ದಾರೆ. ಯಾವ ಶಿಕ್ಷಕರಿಗೂ ವೈಯಕ್ತಿಕ ಆಸಕ್ತಿ ಇರಲು ಸಾಧ್ಯವಿಲ್ಲ. ನೀಡಿರುವ ನಮೂನೆಯನ್ನು ತುಂಬಿಸಿಕೊಂಡು ಬಂದಿದ್ದಾರೆ. ಇದು ಖಾಸಗಿ ಅವರು ತಯಾರಿಸಿದ ವರದಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವರದಿ ಜಾರಿ ಆಗಬೇಕು ಎಂದು ನಾನು ಹಾರೈಸುತ್ತೇನೆ. ಸಾಕಷ್ಟು ಪ್ರಯತ್ನದ ನಂತರ ವರದಿ ತಯಾರಿಸಲಾಗಿದೆ. ಜನರ ಮನಸ್ಸಿನಲ್ಲಿರುವ ಅನುಮಾನ ದೂರವಾಗಲು ವರದಿ ಬಹರಿಂಗವಾಗಬೇಕು ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!