spot_img
Tuesday, March 17, 2026
spot_img

ಜಾತಿ ಗಣತಿ ವರದಿ : ಮಹತ್ವದ ಸಚಿವ ಸಂಪುಟ ಸಭೆ | ನಿರೀಕ್ಷೆಗಳೇನಿವೆ ?

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಜನಗಣತಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (SES-2015) ಯಿಂದ ಉಂಟಾದ ಜಾತಿ ಗೊಂದಲವನ್ನು ಪರಿಹರಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದು, ಸರ್ಕಾರದ ನಿರ್ಣಯದ ಕುರಿತು ತೀವ್ರ ಕುತೂಹಲ ನಿರ್ಮಾಣವಾಗಿದೆ.

ಜಾತಿಗಣತಿ ವರದಿ ಕುರಿತು ಪ್ರಸ್ತುತದ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಗಮನಿಸಿದರೆ, ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದೆ ಸುರಕ್ಷಿತ ರೀತಿಯಲ್ಲಿ ವರ್ತಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇದರಂತೆ ವರದಿಯನ್ನು ಅಧ್ಯಯನ ಮಾಡಲು ಸಚಿವ ಸಂಪುಟವು ಉಪ ಸಮಿತಿಯನ್ನು ಅಥವಾ ನಿವೃತ್ತ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇಲ್ಲದೆ, ವರದಿ ಕುರಿತು ಚರ್ಚಿಯಲು ವಿಶೇಷ ಅಧಿವೇಶನವನ್ನೂ ಕರೆಯಬಹುದು ಎಂದು ಮೂಲಗಳು ತಿಳಿಸಿವೆ.

ಹಿಂದುಳಿದ ವರ್ಗಗಳ ಮೀಸಲಾತಿ ಪುನರ್ರಚಿಸಲು ಆಯೋಗದ ಶಿಫಾರಸುಗಳ ಬಗ್ಗೆಯೂ ಸಂಪುಟವು ಚರ್ಚಿಸುವ ಸಾಧ್ಯತೆಯಿದೆ, ಇಂದು ಸಂಜೆ 4ಕ್ಕೆ ವಿಶೇಷ ಸಚಿವ ಸಂಪುಟ ಸಭ ನಡೆಯಲಿದ್ದು, ಯಾವ ತೀರ್ಮಾನ ಹೊರಬೀಳಬಹುದು ಎಂಬ ಕುರಿತು ತೀವ್ರ ಕುತೂಹಲ ನಿರ್ಮಾಣವಾಗಿದೆ.

ಜಾತಿ ಗಣತಿ ವರದಿಯಮುಖ್ಯಾಂಶಗಳ ಸಂಕ್ಷಿಪ್ತ ವರದಿ ಕಳೆದ ವಾರವೇ ಸಚಿವರ ಕೈ ಸೇರಿದ್ದು, ವರದಿ ಅಧ್ಯಯನ ನಡೆಸಿ ಗುರುವಾರದ ಸಂಪುಟ ಸಭೆಯಲ್ಲಿ ಅಭಿಪ್ರಾಯ ಮಂಡಿಸುವಂತೆ ಸೂಚಿಸಲಾಗಿತ್ತು. ಇದರ ಬೆನ್ನಲ್ಲೇ ವರದಿಯ ಮುಖ್ಯಾಂಶಗಳು ಬಹಿರಂಗಗೊಂಡು ಸಮುದಾಯಗಳ ಮುಖಂಡರ ಅವಗಾಹನೆಗೂ ಲಭ್ಯವಾದವು.

ಇಷ್ಟಾಗುತ್ತಿದ್ದಂತೆಯೇ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರೆ, ಹಿಂದುಳಿದ ವರ್ಗಗಳು ಈ ವರದಿ ಪರ ಪ್ರಬಲ ಬೆಂಬಲ ವ್ಯಕ್ತಪಡಿಸಿವೆ. ಇದೇ ವೇಳೆ ಸಮುದಾಯದ ಮುಖಂಡರು ಹಾಗೂ ಶಾಸಕರು ತಮ್ಮ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆಗಳನ್ನು ನಡೆಸಿ ಸಮುದಾಯದ ಹಿತ ಕಾಪಾಡಲು ಸಚಿವ ಸಂಪುಟ ಸಭೆಯಲ್ಲಿ ಯಾವ ರೀತಿ ವಾದ ಮಂಡಿಸಬೇಕು ಎಂಬ ಮಾಹಿತಿಯನ್ನು ಈಗಾಗಲೇ ಸಚಿವರಿಗೆ ನೀಡಿದ್ದಾರೆ.

ಏನೆಲ್ಲಾ ಆಗಬಹುದು ? ನಿರೀಕ್ಷೆಗಳೇನಿವೆ ?

  • ವರದಿ ಬಗ್ಗೆ ಕೂಲಂಕಷ ಅಧ್ಯಯನ ನಡೆಸಿ ವರದಿ ನೀಡಲು ಸಚಿವ ಸಂಪುಟ ಉಪಸಮಿತಿ ರಚನೆ ಮಾಡಬಹುದು
  • ರಾಜಕೀಯೇತರ ಅಧ್ಯಯನ ನಡೆಸಬೇಕೆಂದಾದರೆ ಹಿರಿಯ ಅಧಿಕಾರಿಗಳು ಅಥವಾ ವಿಷಯ ತಜ್ಞರ ಸಮಿತಿಯನ್ನು ಸರ್ಕಾರ ರಚನೆ ಮಾಡಬಹುದು
  • ಯಾವುದೇ ಸಮಿತಿ ರಚನೆಯಾದರೂ ವರದಿ ನೀಡಲು 3 ರಿಂದ 6 ತಿಂಗಳ ಕಾಲಾವಕಾಶವನ್ನು ನೀಡಬಹುದು
  • ಜನಪ್ರತಿನಿಧಿಗಳ ಅಭಿಪ್ರಾಯವನ್ನು ಪಡೆಯಬೇಕೆಂಬ ಒತ್ತಾಯ ಹೆಚ್ಚಾದರೆ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಸಂಪುಟ ನಿರ್ಧರಿಸಬಹುದು.
  • ವರದಿಯನ್ನು ಅಪ್ಡೇಟ್ ಮಾಡಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸು ಮಾಡಬಹುದು
  • ವರದಿ ಬಗ್ಗೆ ಜಾತಿವಾರು ಇರುವ ಆಕ್ಷೇಪಣೆ ಆಲಿಸಲು ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷರಿಗೆ ಸೂಚಿಸಬಹುದು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!