spot_img
Wednesday, April 1, 2026
spot_img

ಆರ್.ಎಸ್.ಎಸ್ ನ ಸುಳ್ಳುಗಳ ವಿರುದ್ಧ ನಾವು ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು : ಸಿದ್ದರಾಮಯ್ಯ

 ಜನಪ್ರತಿನಿಧಿ (ಬೆಂಗಳೂರು) : ರಾಜಕೀಯ ಅಂದರೆ ಬರೀ ಅಧಿಕಾರ ಅಲ್ಲ. ಸೈದ್ಧಾಂತಿಕ ಸ್ಪಷ್ಟತೆಯಿಂದ ಜನರ ಪರವಾಗಿ ನಿಂತು ನಿರಂತರ ಹೋರಾಟ ನಡೆಸುವುದೂ ರಾಜಕೀಯ ಬದ್ಧತೆಯೇ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಅಂಬೇಡ್ಕರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಬಾಬಾ ಸಾಹೇಬರನ್ನು ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ಸುಳ್ಳಿನ ಕಾರ್ಖಾನೆ ಆರ್.ಎಸ್.ಎಸ್ ನ ಸುಳ್ಳುಗಳ ವಿರುದ್ಧ ನಾವು ಸತ್ಯವನ್ನು ದೇಶದ ತುಂಬ ಹೇಳುವ ಎದೆಗಾರಿಕೆ ಬೆಳೆಸಿಕೊಳ್ಳಬೇಕು. ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ತನ್ನ ಬಡವರ, ಮಧ್ಯಮ ವರ್ಗ ವಿರೋಧಿತನವನ್ನು ಬಚ್ಚಿಡಲು ಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಸರ್ಕಾರ ದಿವಾಳಿ ಆಗಿದ್ದರೆ ಗ್ಯಾರಂಟಿಗಳಿಗೆ 56 ಸಾವಿರ ಕೋಟಿ ರೂಪಾಯಿ ಪ್ರತೀ ವರ್ಷ ತೆಗೆದಿಡಲು ಸಾಧ್ಯವಾಗುತ್ತಿತ್ತಾ? ಹಾಲಿನ ಬೆಲೆ 4 ರೂ ಹೆಚ್ಚಳ ಮಾಡಿರುವುದು ರೈತರ ಜೇಬಿಗೆ ಹೋಗುತ್ತಿದೆ. ಸರ್ಕಾರಕ್ಕೆ ಬರುತ್ತಿಲ್ಲ. ನೀವು ಗ್ಯಾಸ್ ಬೆಲೆ ಹತ್ತಾರು ಬಾರಿ ಹೆಚ್ಚಿಸಿ ಈಗ ಮತ್ತೆ 50 ರೂ ಹೆಚ್ಚಿಸಿದ್ದೀರಿ. ಈ ಹೆಚ್ಚುವರಿ ಹಣ ಯಾರಿಗೆ ಹೋಗುತ್ತಿದೆ ಹೇಳಿ ಮೋದಿಯವರೇ? ಎಂದು ಅವರು ಪ್ರಶ್ನಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!