spot_img
Saturday, February 14, 2026
spot_img

ಜಾತಿ ಗಣತಿ ವರದಿಯ ಅಂಗೀಕಾರ, ಸ್ವೀಕಾರ ವಿಚಾರದಲ್ಲಿ ಸರ್ಕಾರ ತಪ್ಪು ಮಾಡಿದೆ : ಕೋಟ ಶ್ರೀನಿವಾಸ ಪೂಜಾರಿ

ಜನಪ್ರತಿನಿಧಿ (ಉಡುಪಿ) : ಈಗಾಗಲೇ ವರದಿಯ ಅಂಗೀಕಾರ, ಸ್ವೀಕಾರ ವಿಚಾರದಲ್ಲಿ ಸರ್ಕಾರ ತಪ್ಪು ಮಾಡಿದೆ. ರಾಜ್ಯ ಸರ್ಕಾರದ ಜಾತಿ ಜನಗಣತಿ ವರದಿಯ ಬಗ್ಗೆ ಬಿಜೆಪಿ ಕಾದು ನೋಡುವ ತೀರ್ಮಾನ ಮಾಡಿದೆ. ಸಿಎಂ ಅವರು ತಮಗೆ ಎದುರಾಗಿರುವ ಗಂಡಾಂತರದಿಂದ ಪಾರಾಗಲು ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದರು.

ವರದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವರದಿಗಾಗಿ ಸಿದ್ದರಾಮಯ್ಯ ಅವರೇ ಕಾಂತರಾಜು ಅವರನ್ನು ನೇಮಿಸಿದ್ದು, ಅವರೇ ಅದಕ್ಕಾಗಿ ಹಣ ಬಿಡುಗಡೆ ಮಾಡಿದ್ದರು. ನಾವು ಹಿಂದುಳಿದ ವರ್ಗಗಳ ಪರವಾಗಿದ್ದೇವೆ. ನಾವು ಸಭೆ ಸೇರಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದರು.

“ಅಲ್ಪಸಂಖ್ಯಾತರನ್ನು ಒಂದೇ ಜಾತಿ ಎಂದು ಪರಿಗಣಿಸಲಾಗಿದೆ. ಲಿಂಗಾಯತರು ಒಕ್ಕಲಿಗರನ್ನು ವಿಂಗಡಿಸಿ ಸಮಾಜವನ್ನು ಒಡೆಯಲಾಗಿದೆ. ವಿಶ್ವಕರ್ಮರು, ಈಡಿಗರು, ಬಲಿಜಿಗರು ನಾವು 30 – 35 ಲಕ್ಷ ಇದ್ದೇವೆ ಎನ್ನುತ್ತಾರೆ. ವರದಿ 11-12 ಲಕ್ಷ ಎನ್ನುತ್ತಿದೆ, ಬಹುದೊಡ್ಡ ಸಂಖ್ಯೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮುಖಂಡರು ಜಾತಿ ಆಧಾರದಲ್ಲಿ ನಮ್ಮನ್ನು ವಿಭಜನೆ ಮಾಡಿದ್ದಾರೆ ಎನ್ನುತ್ತಿದ್ದಾರೆ’ ಎಂದವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!