spot_img
Tuesday, March 31, 2026
spot_img

ಉಡುಪಿ : ಕೇಂದ್ರದಿಂದ ಇ.ಡಿ ದುರ್ಬಳಕೆ : ಮಂಜುನಾಥ್‌ ಭಂಡಾರಿ ಆಕ್ರೋಶ

ಜನಪ್ರತಿನಿಧಿ (ಉಡುಪಿ) : ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ (ಇ.ಡಿ), ಸಿಬಿಐ ಮೊದಲಾದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷದ ನಾಯಕರನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಆರೋಪ ಮಾಡಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಆದಿ ಉಡುಪಿಯ ಆದಾಯ ತೆರಿಗೆ ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಅ ಶೋಕ್‌ ಚೌಹಾಣ್ ಸೇರಿದಂತೆ ಹಲವಾರು ನಾಯಕರ ವಿರುದ್ದ ಪ್ರಕರಣಗಳನ್ನು ದಾಖಲಿಸಿ, ಅನಂತರ ಅವರನ್ನು ಬಿಜೆಪಿಗೆ ಸೇರಿಸಿಕೊಂಡು ಅವರ ವಿರುದ್ಧದ ಪ್ರಕರಣಗಳನ್ನು ಖುಲಾಸೆಗೊಳಿಸಲಾಗಿದೆ ಎಂದರು.

ಇಂದು ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತಿದೆ. ಪ್ರಜಾಪ್ರಭುತ್ವವನ್ನು ಮುಂದಿನ ಪೀಳಿಗೆಗೂ ಉಳಿಸಲು ನಾವೆಲ್ಲ ಒಗ್ಗಟ್ಟಾಗಿ ಹೋರಾಟ ನಡೆಸುವ ಅಗತ್ಯ ಇದೆ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!