spot_img
Wednesday, April 1, 2026
spot_img

ಸಿ.ಇ.ಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ, ಶಿವದಾರ, ರುದ್ರಾಕ್ಷಿಸರ ತೆಗೆಸಿದ್ದಕ್ಕೆ ಸಂಸದ ಬಿ.ವೈ.ರಾಘವೇಂದ್ರ ಖಂಡನೆ

ಕುಂದಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಿ.ಯು.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿ.ಇ.ಟಿ ಪರೀಕ್ಷೆಯನ್ನು ಏಪ್ರಿಲ್ 16 ಮತ್ತು 17 ರಂದು ನಡೆಸಿದ್ದು, ಶಿವಮೊಗ್ಗ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯು ಕೈಗೆ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಮೈಮೇಲೆ ಧರಿಸಿದ್ದ ಜನಿವಾರ, ವಿದ್ಯಾರ್ಥಿಗಳ ಕೊರಳಲ್ಲಿ ಇದ್ದ ಶಿವದಾರ ಹಾಗೂ ರುದ್ರಾಕ್ಷಿಸರವನ್ನು ಭದ್ರತಾ ಸಿಬ್ಬಂದಿ ತೆಗೆಸಿದ್ದಾರೆ ಎಂದು ಪೋಷಕರುಗಳು ಆರೋಪಿಸಿಸಿದ್ದು ಈ ಘಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ಖಂಡಿಸಿದ್ದಾರೆ.

ಈ ಘಟನೆ ಹಿಂದೂಗಳ ಧಾರ್ಮಿಕ ಭಾವನೆಗೆ ತೀವ್ರತರವಾದ ಧಕ್ಕೆ ಉಂಟಾಗಿದೆ. ಇದು ವಿದ್ಯಾರ್ಥಿಗಳ ಪರೀಕ್ಷೆಯ ಕಾರ್ಯಕ್ಷಮತೆಯ ಮೇಲೆ ತೀವ್ರತರವಾದ ಪರಿಣಾಮ ಬೀರಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ನೇಮಕಾತಿ ಪರೀಕ್ಷೆ, ಸ್ಪಧಾತ್ಮಕ ಪರೀಕ್ಷೆ ಹಾಗೂ ಪ್ರವೇಶ ಪರೀಕ್ಷೆಗೆ ವಸ್ತ್ರ ಸಂಹಿತೆ ಬಗ್ಗೆ ಸ್ಪಷ್ಟವಾದ ಸೂಚನೆಯನ್ನು ನೀಡಿದ್ದಾಗ್ಯೂ ಕೂಡ ಅದನ್ನು ಉಲ್ಲಂಘಸಿ ಸಿ.ಇ.ಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಧರಿಸಿದ್ದ ಶಿವದಾರ, ಜನಿವಾರ, ರುದ್ರಾಕ್ಷಿ ಸರಗಳನ್ನು ತೆಗೆಸಿರುವ ಕ್ರಮ ಖಂಡನೀಯವಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ. ಹಾಗೂ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಸರ್ಕಾರವು ಸೂಕ್ತವಾದ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಬಿ.ವೈ.ರಾಘವೇಂದ್ರ ಒತ್ತಾಯಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!