spot_img
Wednesday, April 1, 2026
spot_img

ಆಕಾಶ್ ಎಜುಕೇಷನಲ್ ಸರ್ವೀಸಸ್: ಜೆ‌ಇ‌ಇ ಮುಖ್ಯ ಪರೀಕ್ಷೆಯಲ್ಲಿ ಅನಿಕೇತ್ ಡಿ ಶೆಟ್ಟಿ, ವಿಠಲ್ ದಾಸ್ ಎ ಅವರಿಗೆ ಶೇ.99.90 ಅಂಕ

ಮಂಗಳೂರು : ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್ (ಎ‌ಇ‌ಎಸ್.ಎಲ್), ಜಂಟಿ ಪ್ರವೇಶ ಪರೀಕ್ಷೆ (ಜೆ‌ಇ‌ಇ) ಮುಖ್ಯ ಪರೀಕ್ಷೆ 2025 (ಸೆಷನ್-2) ನಲ್ಲಿ ಮಂಗಳೂರಿನ ಅನಿಕೇತ್ ಡಿ ಶೆಟ್ಟಿ ಮತ್ತು ವಿಟ್ಟಲ್ ದಾಸ್ ಎ ಪರೀಕ್ಷೆಯ ಎರಡನೇ ಅವಧಿಯಲ್ಲಿ 99.90% ಶೇಕಡಾ ಅಂಕಗಳನ್ನು ಗಳಿಸಿದ್ದಾರೆ.

ಈ ಫಲಿತಾಂಶಗಳು ಭಾರತದ ಅತ್ಯಂತ ಸವಾಲಿನ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಸಮರ್ಪಣೆ ಮತ್ತು ಶೈಕ್ಷಣಿಕ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತವೆ. ಈ ವರ್ಷ ನಿಗದಿಯಾಗಿದ್ದ ಎರಡನೇ ಮತ್ತು ಅಂತಿಮ ಜೆ‌ಇ‌ಇ ಸೆಶನ್ ವೇಳಾಪಟ್ಟಿ ಅಂತಿಮವಾಗುತ್ತಿದ್ದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಫಲಿತಾಂಶಗಳನ್ನು ಪ್ರಕಟಿಸಿದೆ.

ಆಕಾಶ್ ಎಜುಕೇಷನಲ್ ಸರ್ವೀಸಸ್ ಲಿಮಿಟೆಡ್‌ನ ಮುಖ್ಯ ಶೈಕ್ಷಣಿಕ ಮತ್ತು ವ್ಯವಹಾರ ಮುಖ್ಯಸ್ಥ ಧೀರಜ್ ಕುಮಾರ್ ಮಿಶ್ರಾ ಮಾತನಾಡಿ, ಜೆ‌ಇ‌ಇ ಮೇನ್ 2025 ರಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ಕಠಿಣ ಪರಿಶ್ರಮ ಮತ್ತು ದೃಢನಿಶ್ಚಯ, ಸರಿಯಾದ ತರಬೇತಿಯೊಂದಿಗೆ ಸೇರಿ ಈ ಅತ್ಯುತ್ತಮ ಫಲಿತಾಂಶಗಳಿಗೆ ಕಾರಣವಾಗಿದೆ. ನಮ್ಮ ಎಲ್ಲಾ ಯಶಸ್ವಿ ವಿದ್ಯಾರ್ಥಿಗಳಿಗೆ ಪ್ರಯಾಣದ ಮುಂದಿನ ಹಂತಗಳಿಗೆ ಶುಭ ಹಾರೈಸುತ್ತೇವೆ ಎಂದರು.

AESL, ಉನ್ನತ ಮಟ್ಟದ ವೈದ್ಯಕೀಯ (NEET) ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳು (JEE)) ಹಾಗೂ NTSE ಮತ್ತು ಒಲಿಂಪಿಯಾಡಗಳಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡುವ ಗುರಿ ಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಮತ್ತು ಪರಿಣಾಮಕಾರಿ ತಯಾರಿ ಕಾರ್ಯಕ್ರಮ ಗಳನ್ನು ನೀಡುವುದಕ್ಕೆ ಗುರುತಿಸಲ್ಪಟ್ಟಿದೆ.

ಈ ವೇಳೆ ಬ್ರಾಂಚ್ ಹೆಡ್ ಸೂರಜ್ ಪ್ರಭು, ಮಂಗಳೂರು – ಉಡುಪಿ ಸಹಾಯಕ ನಿರ್ದೇಶಕ ಶ್ಯಾಮ್ ಪ್ರಸಾದ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!