spot_img
Thursday, March 19, 2026
spot_img

ಏ.29: ನಾಗೂರು ಶ್ರೀ ನಾಗಯಕ್ಷಿ ದೇವಸ್ಥಾನ: ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ

ಜನಪ್ರತಿನಿಧಿ ವಾರ್ತೆ] ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಾಗೂರು ಶ್ರೀ ನಾಗಯಕ್ಷಿ ದೇವಸ್ಥಾನದ ಶ್ರೀ ನಾಗಯಕ್ಷಿ ದೇವಿಯ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಏ.28 ಸೋಮವಾರ ಮತ್ತು ಏ.29 ಮಂಗಳವಾರ ನಡೆಯಲಿದೆ.

ಏ.28ರಂದು ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದೆ. ಸಂಜೆ 7.30ರಿಂದ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಏ.29ರಂದು ಬೆಳಿಗ್ಗೆ 8.05ಕ್ಕೆ ಶ್ರೀ ದೇವಿಯ ಪ್ರತಿಷ್ಠಾಪನೆ, ಕಲಾ ತತ್ವಹೋಮ, ಕಲಧಿವಾಸಹೋಮ, ಬ್ರಹ್ಮ ಕಲಶಾಭಿಷೇಕ, ಮಹಾಪೂಜೆ, ಮಂಗಳಾರತಿ ಸೇವೆಗಳು ನಡೆಯಲಿದೆ. ಮಧ್ಯಾಹ್ನ 12.30ರಿಂದ ಮಹಾಅನ್ನಸಂತರ್ಪಣೆ ನಡೆಯಲಿದೆ.

ಸಂಜೆ 4 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಉಡುಪಿ ಕಾಣಿಯೂರು ಮಠದ ಜಗದ್ಗುರು ಮಧ್ವಾಚಾರ್ಯ ಮೂಲ ಮಹಾಸಂಸ್ಥಾನದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.

ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಕೆ.ಗೋಪಾಪ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಭಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಾಬು ಹೆಗ್ಡೆ, ಕಿರಿಮಂಜೇಶ್ವರ ಶ್ರೀ ಅಗಸ್ತ್ಯøಶ್ವರ ದೇವಸ್ಥಾನದ ಮಾಜಿ ಧರ್ಮದರ್ಶಿ ಎನ್.ವಿ.ಪ್ರಕಾಶ ಐತಾಳ್, ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷರಾದ ಶೇಖರ ಖಾರ್ವಿ, ನಾಗೂರು ಶ್ರೀ ನಾಗಯಕ್ಷಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಬಿ.ಕೆ.ಲಕ್ಷ್ಮೀನಾರಾಯಣ, ಉಪಾದ್ಯಕ್ಷರು, ನ್ಯಾಯವಾದಿಗಳಾದ ರವೀಂದ್ರ ಐರೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ರಾತ್ರಿ 8 ಗಂಟೆಯಿಂದ ಸಾಸ್ತಾನ ಗೋಳಿಗರಡಿ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮೇಳದವರಿಂದ ಗೋಳಿಗರಡಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯಲಿದೆ.

ಏ.25ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!