spot_img
Tuesday, March 17, 2026
spot_img

ಮೇ 10ರಂದು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ  | ಒಂದೇ ರೀತಿಯ ಸಮವಸ್ತ್ರದಲ್ಲಿ ಒಂದೂವರೆ ಲಕ್ಷ ಮಹಿಳೆಯರ ಸಮಾವೇಶ

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ನವೋಧಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಅಂಗವಾಗಿ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಮೇ 10ರಂದು ಬಹೃತ್‌ ಮಹಿಳಾ ಸಮಾವೇಶ ನಡೆಯಲಿದೆ. ಒಂದೇ ರೀತಿಯ ಸಮವಸ್ತ್ರದಲ್ಲಿ ವಿವಿಧ ಜಿಲ್ಲೆಗಳ ಒಂದೂವರೆ ಲಕ್ಷ ಮಹಿಳೆಯರು ಸಮಾವೇಶದಲ್ಲಿ ಭಾಗವಹಿಸಲಿದ್ದು ಇದೊಂದು ಐತಿಹಾಸಿಕ, ದೇಶಕ್ಕೆ ಸಂದೇಶ ಕೊಡುವ ಮಾದರಿ ಕಾರ್ಯಕ್ರಮವಾಗಿ ಮೂಡಿಬರಲಿದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ ಸಂಸ್ಥಾಪಕ, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ತಿಳಿಸಿದರು.

ಮಂಗಳವಾರ ಎಸ್‌ಸಿಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಜತ ಸಂಭ್ರಮವನ್ನು ಮೇ 10ರ ಬೆಳಗ್ಗೆ 10ಕ್ಕೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ನವೋದಯ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸವಲತ್ತುಗಳನ್ನು ವಿತರಿಸಲಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸಂತೃಪ್ತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸ್ಪೀಕರ್‌ ಯು.ಟಿ ಖಾದರ್‌ ಸಹಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಅತ್ಯುತ್ತಮ ನವೋದಯ ಗುಂಪುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ್‌ ವಿ.ಜೋಶಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ದೇಶಕ್ಕೆ ಮಾದರಿ ಕಾರ್ಯಕ್ರಮ : 2000ನೇ ಇಸವಿಯ ಜನವರಿ 29ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್‌ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ಇಂದು ವಿಸ್ತಾರವಾಗಿ ಹರಡಿದ್ದು ರಾಜ್ಯದ 8-9 ಜಿಲ್ಲೆಗಳಲ್ಲಿ ಇದರ ಸದಸ್ಯರಿದ್ದಾರೆ. ಸುಮಾರು 8-9 ಲಕ್ಷ ಸದಸ್ಯರಿದ್ದು ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊಟ್ಟಿದೆ. ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ. ಆದ ಕಾರಣ ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. 3೦೦೦ದಷ್ಟು ಬಸ್‌ಗಳಲ್ಲಿ ಜನ ವಿವಿಧ ಕಡೆಗಳಿಂದ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. ಸಮಾವೇಶಕ್ಕೆ ಬರುವವರಿಗೆ ಬೆಳಗ್ಗಿನ ಉಪಾಹಾರ, ಮಜ್ಜಿಗೆ, ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗುವುದು. ಆಂಬುಲೆನ್ಸ್‌, ತುರ್ತು ವೈದ್ಯಕೀಯ ವ್ಯವಸ್ಥೆಗಳನ್ನೂ ಮಾಡಲಾಗುವುದು ಎಂದು ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ  ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ.,  ದೇವಿ ಪ್ರಸಾದ್ ಶೆಟ್ಟಿ ಬೆಳಪು,  ಕೆ. ಜೈರಾಜ್ ಬಿ. ರೈ.,  ಮೋನಪ್ಪ ಶೆಟ್ಟಿ ಎಕ್ಕಾರು, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ  ಕೆ.ಗೋಪಾಲಕೃಷ್ಣ ಭಟ್, ನವೋದಯ ಟ್ರಸ್ಟಿಗಳಾದ  ಮೇಘರಾಜ್ ಆರ್. ಜೈನ್,   ಸುನಿಲ್ ಕುಮಾರ್ ಬಜಗೋಳಿ,  ಜಯಪ್ರಕಾಶ್ ತುಂಬೆ,  ಟ್ರಸ್ಟ್  ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಪೂರ್ಣಿಮಾ ಶೆಟ್ಟಿ , ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!