spot_img
Tuesday, March 17, 2026
spot_img

ಗುಪ್ತಚರ ಇಲಾಖೆಯ ವೈಫಲ್ಯವೇ ಅಮಾಯಕ ಜನರ ಸಾವಿಗೆ ಕಾರಣ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಮಾಧ್ಯಮಗಳ ವರದಿಗಾರರಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಉಗ್ರರ ದಾಳಿ ಪೂರ್ವಯೋಜಿತ ಸಂಚು. ಅಮಾಯಕರ ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ, ಇಷ್ಟು ದೊಡ್ಡಮಟ್ಟದ ಕೃತ್ಯ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿತ್ತು, ಈಗಲೂ ಅದೇ ಮಾದರಿಯ ಘಟನೆ ಮರುಕಳಿಸಿದೆ ಎಂದು ಹೇಳಿದ್ದಾರೆ.

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!