spot_img
Monday, March 16, 2026
spot_img

ಪಹಲ್ಗಾಮ್‌ ಉಗ್ರರ ದಾಳಿ : ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ ಹತ್ತು ಲಕ್ಷ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ, ಕರ್ನಾಟಕದ ಪ್ರವಾಸಿಗರಲ್ಲಿ ಮೃತಪಟ್ಟ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಪಾರ್ಥೀವ ಶರೀರವನ್ನು ತಾಯ್ನಾಡಿಗೆ ಕರೆತರಲು ಹಾಗೂ ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಿದೆ.

ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ ಎಂದು ಇಂದು(ಬುಧವಾರ) ವರದಿಗಾರರಿಗೆ ಸ್ಪಂದಿಸಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದರು. ಸಂಜೆ ಆಗುವುದರೊಳಗೆ ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ ಹತ್ತು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ನೋವಿನ ಗಳಿಗೆಯಲ್ಲಿ ನಾನು ಮತ್ತು ನಮ್ಮ ಸರ್ಕಾರವಿದೆ ಎಂಬ ಧೈರ್ಯವನ್ನೂ ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!