spot_img
Wednesday, April 1, 2026
spot_img

ಯಜ್ಞೋಪವಿತ ಕತ್ತರಿಸಿದ್ದು ಖಂಡನಾರ್ಹ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು-ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು

ಜನಪ್ರತಿನಿಧಿ (ಕುಂದಾಪುರ) : ಸಿ.ಇ.ಟಿ ಪ್ರವೇಶ ಪರೀಕ್ಷೆಯ ಸಂದರ್ಭದಲ್ಲಿ ಯಜ್ಞೋಪವಿತವನ್ನು ಕತ್ತರಿಸಿದ್ದು, ಹಾಗೂ ಜನಿವಾರ ಧರಿಸಿದವರಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡದಿರುವ ಘಟನೆಯನ್ನು ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ತೀವ್ರವಾಗಿ ಖಂಡಿಸಿದೆ.

ಗುರುವಾರ ಕುಂದಾಪುರ ಪ್ರೆಸ್ ಕ್ಲಬ್‌ನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ವಾದಿರಾಜ ಹೆಬ್ಬಾರ್ ಅವರು ಏ.16ರಂದು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ಇಂಜಿನಿಯರಿಂಗ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ದೈಹಿಕ ತಪಾಸಣೆ ಮಾಡುವ ಸೋಗಿನಲ್ಲಿ ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಭಾವನೆ ಹೊಂದಿದ್ದ ಯಜ್ಞೋಪವಿತವನ್ನು ಧರಿಸಿದ್ದರು. ಈ ಪರೀಕ್ಷಾ ಕೇಂದ್ರದ ಅಧಿಕಾರಿಗಳು ದುರುದ್ದೇಶ ಪೂರ್ವಕವಾಗಿ ಹಾಗೂ ವಿದ್ಯಾರ್ಥಿಗಳ ಇಚ್ಚೆಗೆ ವಿರುದ್ಧವಾಗಿ ಕತ್ತರಿಸಿ, ತುಂಡು ಮಾಡಿ ಕಸದ ಬುಟ್ಟಿಗೆ ಹಾಕಿರುತ್ತಾರೆ. ಹಾಗೂ ಅದನ್ನು ಧರಿಸಿಕೊಂಡು ಬಂದರೆ ನಿಮ್ಮನ್ನು ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಕೊಡುವುದಿಲ್ಲವೆಂದು ತಿಳಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಧಾರ್ಮಿಕವಾಗಿ ಹಾಗೂ ಮಾನಸಿಕವಾಗಿ ಘಾಸಿಗೊಂಡಿದ್ದಾರೆ. ಯಾವುದೇ ಪ್ರವೇಶ ಪರೀಕ್ಷೆ ನಿಯಮದಲ್ಲಿ ಯಜ್ಞೋಪವಿತವನ್ನು ಧರಿಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರ್ಬಂಧ ಇಲ್ಲದಿದ್ದರೂ ವೈಯಕ್ತಿಕವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಧಾರ್ಮಿಕ ಆಚರಣೆಯ ಸ್ವಾತಂತ್ರ್ಯವನ್ನು ಕಾನೂನು ಬಾಹಿರವಾಗಿ ಸಾರ್ವಜನಿಕವಾಗಿ ಧಕ್ಕೆ ಉಂಟು ಮಾಡಿದ್ದು ಈ ಕೃತ್ಯದಿಂದ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಗೂ ಯಜ್ಞೋಪವಿತ ಧಾರಣೆಯ ನಂಬಿಕೆ ಉಳ್ಳಂತಹ ಸಾರ್ವಜನಿಕರ ಭಾವನೆಗಳಿಗೆ ತೀವ್ರವಾದ ಘಾಸಿ ಉಂಟು ಮಾಡಿದ್ದಾರೆ. ಇದು ಮುಂದೆ ಪುನರಾವರ್ತನೆ ಆಗಬಾರದು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಸಿ.ಇಟಿ ಪ್ರವೇಶ ಪರೀಕ್ಷೆಯ ಅವಕಾಶ ವಂಚಿತವಾದ ವಿದ್ಯಾರ್ಥಿಗೆ ಮರಳಿ ಅವಕಾಶ ನೀಡಬೇಕು ಎಂದು ತಿಳಿಸಿದರು.

ಯುವ ಬಾಂಧವ್ಯ-2025
ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ, ಉಡುಪಿ ಜಿಲ್ಲಾ ಯುವ ವಿಪ್ರ ವೇದಿಕೆ ವತಿಯಿಂದ ಯುವ ಬಾಂಧವ್ಯ-2025 ಏಪ್ರಿಲ್ 26 ಮತ್ತು 27ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯಲ್ಲಿ ನಡೆಯಲಿದೆ. ಏ.26 ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟ ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಏ.27 ರವಿವಾರ ಬೆಳಿಗ್ಗೆ 8 ಗಂಟೆಗೆ ಪಥ ಸಂಚಲನ ನಡೆಯಲಿದೆ. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಕಾಶ್ಮೀರ ಭಯೋತ್ಪಾದಕ ದಾಳಿಗೆ ಖಂಡನೆ:
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಮಾತನಾಡಿದ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ನಿರ್ದೇಶಕ ರಾಘವೇಂದ್ರ ಅಡಿಗ ೨೮ ಜನರನ್ನು ಬಲಿ ಪಡೆದ ಈ ಅಮಾನವೀಯ ಕೃತ್ಯ ಖಂಡನಾರ್ಹವಾಗಿದ್ದು, ಫಾತಕಿಗಳನ್ನು ಕೂಡಲೆ ಪತ್ತೆಹಚ್ಚಿ ನಿರ್ನಾಮ ಮಾಡಬೇಕು, ಹಿಂದುಗಳಿಗೆ ರಕ್ಷಣೆ ನೀಡಬೇಕು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಅಧ್ಯಕ್ಷರಾದ ಎಸ್.ಕೃಷ್ಣಾನಂದ ಚಾತ್ರ,ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!