spot_img
Wednesday, April 1, 2026
spot_img

ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಜನಪ್ರತಿನಿಧಿ (ಬೆಂಗಳೂರು) : “ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ” ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ಸಂತಾಪ ಸಲ್ಲಿಸಲು ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉಗ್ರರ ದಾಳಿಗಳನ್ನು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಇಂದು ನಡೆದ ಸಂಪುಟ ಸಭೆಯು ತೆಗೆದುಕೊಂಡಿದೆ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!