spot_img
Wednesday, April 1, 2026
spot_img

ಸಿ‌ಇಟಿ ಪರೀಕ್ಷೆಯಲ್ಲಿ ಜನಿವಾರ ತಗೆಸಿದ ಪ್ರಕರಣ ಖಂಡಿಸಿ ಕುಂದಾಪುರದಲ್ಲಿ ಬ್ರಾಹ್ಮಣ ಪರಿಷತ್ ಪ್ರತಿಭಟನೆ

ಕುಂದಾಪುರ : ಶಿವಮೊಗ್ಗ ಮತ್ತು ರಾಜ್ಯದ ಇತರ ಕಡೆಗಳಲ್ಲಿ ಸಿ‌ಇಟಿ ಪರೀಕ್ಷೆ ಬರೆಯುವ ಸಂದರ್ಭ ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಬಲವಂತವಾಗಿ ಜನಿವಾರ ತೆಗೆಸಿ ಸಿ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ನಿರ್ಬಂಧವನ್ನು ವಿಧಿಸಿ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿರುವುದನ್ನು ಖಂಡಿಸಿ ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ವತಿಯಿಂದ ಕುಂದಾಪುರ ಉಪವಿಭಾಗಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರಾದ ಸುಬ್ರಹ್ಮಣ್ಯ ಹೊಳ್ಳ, ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನಿವಾರವನ್ನು ಧರಿಸಿಕೊಂಡು ಬಂದರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡುದಿಲ್ಲ ಎಂದು ಬೆದರಿಕೆಯೊಡ್ಡಿ ವಿದ್ಯಾರ್ಥಿಗಳಿಗೆ ಧಾರ್ಮಿಕವಾಗಿ ಹಾಗೂ ಮಾನಸಿಕವಗಿ ಘಾಸಿ ಮಾಡಿದ್ದಾರೆ. ಯಾವುದೇ ಪ್ರವೇಶ ನಿಯಮಗಳಲ್ಲಿ ಜನಿವಾರವನ್ನು ಧರಿಸಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರ್ಬಂಧ ಇಲ್ಲದಿದ್ದರೂ, ವೈಯಕ್ತಿಕ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಧಾರ್ಮಿಕ ಆಚರಣೆಯ ಸ್ವಾತಂತ್ರ್ಯವನ್ನು ಕಾನೂನು ಬಾಹಿರವಾಗಿ ಸಾರ್ವಜನಿಕವಾಗಿ ಧಕ್ಕೆ ಉಂಟುಮಾಡಿದ್ದು, ಅಧಿಕಾರಿಗಳ ಈ ಕೃತ್ಯದಿಂದ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಹಾಗೂ ಯಜ್ಞೋಪವಿತ ಧಾರಣೆಯ ನಂಬಿಕೆ ಉಳ್ಳಂತಹ ಸಾರ್ವಜನಿಕರ ಭಾವನೆಗಳಿಗೆ ತೀವ್ರವಾದ ಘಾಸಿ ಉಂಟು ಮಾಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿಪ್ರವಾಣಿ ಸಂಪಾದಕ ಶಂಕರ ರಾವ್ ಕಾಳಾವರ ಮಾತನಾಡಿ, ಸರಕಾರ ಕೂಡಲೇ ಕ್ರಮಕೈಗೊಳ್ಳಬೇಕು. ಸರಕಾರ ಸ್ಪಂದಿಸದಿದ್ದಲ್ಲಿ ಮತ್ತು ಸರಿಯಾದ ಉತ್ತರ ದೊರೆಯದಿದ್ದಲ್ಲಿ ಬ್ರಾಹ್ಮಣ ಸಂಘಟನೆಗಳ ಮೂಲಕ ರಾಜ್ಯಾದ್ಯಂತ ವಿಶೇಷ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಕುಂದಾಪುರ ಅಧ್ಯಕ್ಷ ಎಸ್.ಕೃಷ್ಣಾನಂದ ಚಾತ್ರ, ಪ್ರಧಾನ ಕಾರ್ಯದರ್ಶಿ ವಾದಿರಾಜ ಹೆಬ್ಬಾರ್, ಯುವ ವಿಪ್ರ ವೇದಿಕೆ ಅಧ್ಯಕ್ಷೆ ಪವಿತ್ರ ಅಡಿಗ, ಮಹಿಳ ವೇದಿಕೆ ಅಧ್ಯಕ್ಷೆ ಭಾರ್ಗವಿ ಭಟ್ ಬೆಳ್ವೆ, ಯುವ ವೇದಿಕೆ ಅಧ್ಯಕ್ಷ ಕೇಶವ ಅಡಿಗ ಬಸ್ರೂರು, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್, ರಾಘವೇಂದ್ರ ಅಡಿಗ, ಸಂದೇಶ ಭಟ್ ಉಪಸ್ಥಿತರಿದ್ದರು. ಪ್ರತಿಭಟನನಿರತರು ಪ್ರಭಾರ ತಹಶೀಲ್ದಾರ್ ಅವರಿಗೆ ಸಲ್ಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!