spot_img
Wednesday, April 1, 2026
spot_img

ಶ್ರೀ ಯೋಗಾರೂಢ ನರಸಿಂಹ ದೇವಸ್ಥಾನ ನರಸೀಪುರ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ರೂ. 5 ಲಕ್ಷ ನೆರವು ಹಸ್ತಾಂತರ

ಕುಂದಾಪುರ: ಕುಂದಾಪುರ ತಾಲೂಕಿನ ಅಮಾಸೆಬೈಲು ವಲಯದ ಶ್ರೀ ಯೋಗಾರೂಢ ನರಸಿಂಹ ದೇವಸ್ಥಾನ ನರಸೀಪುರ, ರಟ್ಟಾಡಿ. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರದಿಂದ ನೀಡಿದ ರೂ.5 ಲಕ್ಷ ಆರ್ಥಿಕ ನೆರವು ಮಂಜೂರು ಮಾಡಿದ್ದು ಡಿ.ಡಿಯನ್ನು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರಟ್ಡಾಡಿ ನವೀನ್ ಚಂದ್ರ ಶೆಟ್ಟಿ, ಜಿಲ್ಲಾ ನಿರ್ದೇಶಕರಾದ ನಾಗರಾಜ ಶೆಟ್ಟಿ ಹಾಗೂ ಯೋಜನಾಧಿಕಾರಿಗಳಾದ ನಾರಾಯಣ ಪಾಲನ್ ಅವರು ಶಾಸಕರು ಹಾಗೂ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಕಿರಣ್ ಕುಮಾರ್ ಕೊಡ್ಗಿಯವರಿಗೆ ಹಸ್ತಾಂತರಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿದರು. ಜಿಲ್ಲಾ ನಿರ್ದೇಶಕರಾದ ನಾಗರಾಜ ಶೆಟ್ಟಿ ಶುಭ ಹಾರೈಸಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರಟ್ಡಾಡಿ ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ ಹೆಗ್ಗಡೆಯವರು ಅನೇಕ ದೇವಸ್ಥಾನ ಮಠ ಮಂದಿರಗಳಿಗೆ ಹಾಗೂ ಸಾಮಾಜಿಕ ಪ್ರಗತಿಪರ ಚಟುವಟಿಕೆಗಳಿಗೆ ಸಹಾಯ ಮಾಡುತ್ತಿದ್ದು ಪ್ರತಿಯೊಬ್ಬರೂ ಕೂಡ ಇದನ್ನು ಅರ್ಥ ಮಾಡಿಕೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇದರಿಂದ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.

ಈ ಸಂದರ್ಭದಲ್ಲಿ ತೊಂಭತ್ತು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ನವೀನ್ ಚಂದ್ರ ಹೆಗ್ಡೆ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಕಿರಣ ಕುಮಾರ್ ಶೆಟ್ಟಿ, ಕೃಷ್ಣ ಪೂಜಾರಿ, ಜೀರ್ಣೋದ್ದಾರ ಸಮಿತಿ ಅದ್ಯಕ್ಷರಾದ ಚಿತ್ತರಂಜನ ರಾವ್ ಮಾವಿನಕಾಡು, ಅಮಾಸೆಬೈಲು ವಲಯಾಧ್ಯಕ್ಷರಾದ ಭೋಜರಾಜ, ಸ್ಥಳೀಯರಾದ ಸದಾಶಿವ ಶೆಟ್ಟಿ ಜಡ್ಡಿನಗದ್ದೆ, ರಾಮಣ್ಣ ಹೆಗೆ ಕೆಳಾಸುಂಕ, ವೈ ಕುಶಲ್ ತೋಳಾರ್ ಬಳ್ಮನೆ, ಕೃಷ್ಣ ಕುಮಾರ್ ಭಾಗವತ ಅಮಾಸೆಬೈಲು, ಸೇವಾಪ್ರತಿನಿಧಿ ಗಂಗಾಮಣಿ, ಜೀರ್ಣೋದ್ದಾರ ಸಮಿತಿ ಸದಸ್ಯರು ಮತ್ತು ಆಡಳಿತ ಮಂಡಳಿ ಸದಸ್ಯರು ಹಾಗೂ ಹೆಚ್ಚಿನ ಸಂಖೈಯಲ್ಲಿ ಭಕ್ತರು ಉಪಸ್ಥಿತರಿದ್ದರು .ಅಮಾಸೆಬೈಲು ವಲಯ ಮೇಲ್ವಿಚಾರಕ ಸಂದೀಪ್ ಕಾರ್ಯಕ್ರಮ ನಿರ್ವಹಿಸಿದರು. ದೇವಸ್ಥಾನ ಸಮಿತಿ ಕಾರ್ಯದರ್ಶಿ ಶಂಕರ್ ಉಳ್ಳೂರು ಸ್ವಾಗತಿಸಿದರು. ಆಡಳಿತ ಮಂಡಳಿಯ ಮೊಕ್ತೇಸರರಾದ ಶಂಕರ ನಾರಾಯಣ ಕೊಡ್ಗಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!