spot_img
Wednesday, March 4, 2026
spot_img

ಲಷ್ಕರ್-ಎ-ತೋಯ್ಬಾ ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಫಿನಿಶ್‌ !

ಜನಪ್ರತಿನಿಧಿ (ಶ್ರೀನಗರ) : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಮೃತಪಟ್ಟಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ, ಉಗ್ರರನ್ನು ಸೆದೆಬಡಿಯುವ ಕೆಲಸದಲ್ಲಿ ಭಾರತೀಯ ಸೇನೆ ನಿರತವಾಗಿದೆ. ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು(ಶುಕ್ರವಾರ) ಬೆಳಗ್ಗೆ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹೊಡೆದುರುಳಿಸಲಾಗಿದೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಭಯೋತ್ಪಾದಕರು ಇರುವ ಜಾಗವನ್ನು ಪತ್ತೆಹಚ್ಚಲಾಯಿತು. ಬಳಿಕ ಗುಂಡಿನ ಚಕಮಕಿ ನಡೆದು, ಎಲ್​ಇಟಿ ಕಮಾಂಡರ್​ನ್ನು ಹೊಡೆದುರುಳಿಸಲಾಯಿತು ಎಂದು ವರದಿಯಾಗಿದೆ.

ಇದೇ ವೇಳೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಶ್ರೀನಗರಕ್ಕೆ ಆಗಮಿಸಿದ್ದಾರೆ. ಬಂಡಿಪೋರಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪರಿಸ್ಥಿತಿಯ ಸಮಗ್ರ ಭದ್ರತಾ ಪರಿಶೀಲನೆ ನಡೆಸುತ್ತಿದ್ದಾರೆ.

ಭಯೋತ್ಪಾದಕರು ಅಲ್ಲಿ ಅಡಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಪಡೆದ ಸೇನೆ ಅಲ್ಲಿಗೆ ತೆರಳಿತ್ತು. ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಮೊದಲು ಉಗ್ರರು ಸೇನೆಯ ಮೇಲೆ ಗುಂಡು ಹಾರಿಸಿದ್ದರು.

ಅದಕ್ಕೆ ಪ್ರತಿಯಾಗಿ ಸೇನೆಯು ಕೂಡ ದಾಳಿ ನಡೆಸಿತು. ಭದ್ರತಾ ಪಡೆಗಳು ಬೆನ್ನಟ್ಟುತ್ತಿದ್ದ ಭಯೋತ್ಪಾದಕರಲ್ಲಿ ಒಬ್ಬನಿಗೆ ಆರಂಭಿಕ ಗುಂಡಿನ ಚಕಮಕಿಯಲ್ಲಿ ಗಾಯಗಳಾಗಿವೆ ಎಂದು ವರದಿಯಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!