spot_img
Wednesday, March 4, 2026
spot_img

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಮದ್ಯಪಾನ ನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಲೆಮಹದೇಶ್ವರ ಬೆಟ್ಟದ ಸಮೀಪ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ.  ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ಹೇಳಿದರು.

ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯಪಾನ ನಿಷೇಧವಾಗಬೇಕು, ದೇವಸ್ಥಾನದಿಂದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ  ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!