spot_img
Wednesday, March 4, 2026
spot_img

ಇಸ್ರೋ ಮಾಜಿ ಅಧ್ಯಕ್ಷ, ಎನ್ಇಪಿ ಕರಡು ಸಮಿತಿಯ ಅಧ್ಯಕ್ಷ ಕೆ. ಕಸ್ತೂರಿ ರಂಗನ್‌ ವಿಧಿವಶ

ಜನಪ್ರತಿನಿಧಿ (ನವ ದೆಹಲಿ) : ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ (84 ) ಶುಕ್ರವಾರ ಬೆಂಗಳೂರಿನಲ್ಲಿ ಇಂದು (ಶುಕ್ರವಾರ) ನಿಧನರಾದರು.

ಕಸ್ತೂರಿರಂಗನ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕಸ್ತೂರಿ ರಂಗನ್‌ ಅವರು 1940 ಅಕ್ಟೋಬರ್‌ 24ರಂದು ಎರ್ನಾಕುಳಂನಲ್ಲಿ ಜನಿಸಿದ್ದರು.

ರಾಜ್ಯಸಭೆಯ ಸದಸ್ಯರಾಗಿ(2003–09), ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದರು. 2004ರ ಎಪ್ರಿಲ್ ನಿಂದ 2009ರವರೆಗೆ ಬೆಂಗಳೂರಿನ ನ್ಯಾಷ ನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾಗಿದ್ದರು.ಪಶ್ಚಿಮ ಘಟ್ಟ ಸಂರಕ್ಷಣೆಗೆ ಕಸ್ತೂರಿ ರಂಗನ್ ಅವರು ಕೇಂದ್ರ ಸರ್ಕಾರಕ್ಕೆ ವರದಿ ನೀಡಿದ್ದರು.

ಬಾಹ್ಯಾಕಾಶ ಕ್ಷೇತ್ರದಲ್ಲಿನ ಅತ್ಯುತ್ತಮ ಕೊಡುಗೆಗಳಿಗಾಗಿ ಕಸ್ತೂರಿರಂಗನ್ ಅವರಿಗೆ ಎಂಜಿನಿಯರಿಂಗ್‌ನಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ, ಏರೋಸ್ಪೇಸ್‌ನಲ್ಲಿ ಡಾ. ವಿಕ್ರಮ್ ಸಾರಾಭಾಯ್ ಪ್ರೇರಿತ್ ಪ್ರಶಸ್ತಿ, ಖಗೋಳಶಾಸ್ತ್ರದಲ್ಲಿ ಎಂಪಿ ಬಿರ್ಲಾ ಸ್ಮಾರಕ ಪ್ರಶಸ್ತಿ, ಅನ್ವಯಿಕ ವಿಜ್ಞಾನದಲ್ಲಿ ಎಂಎಂ ಚುಗನಿ ಸ್ಮಾರಕ ಪ್ರಶಸ್ತಿ, ವಿಜ್ಞಾನದಲ್ಲಿ ಎಚ್‌ಕೆ ಫಿರೋದಿಯಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. ಅಷ್ಟೇ ಅಲ್ಲದೆ, ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಕೂಡ ಬಂದಿವೆ. ಖಗೋಳಶಾಸ್ತ್ರ, ಬಾಹ್ಯಾಕಾಶ ವಿಜ್ಞಾನ, ಬಾಹ್ಯಾಕಾಶ ಅಪ್ಲಿಕೇಷನ್ಸ್‌ಗಳ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಕಸ್ತೂರಿರಂಗನ್ ಅವರ 200ಕ್ಕೂ ಹೆಚ್ಚು ಪ್ರಬಂಧಗಳು ಪ್ರಕಟವಾಗಿವೆ.
ಬಾಹ್ಯಾಕಾಶ ವಿಜ್ಞಾನಿಯಾಗಿ ಅವರ ಕೊಡುಗೆಯ ಜೊತೆಗೆ, ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸಂರಕ್ಷಣೆ (2013) ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (2020) ಕುರಿತ ಅವರ ವರದಿಗಳು ಮಹತ್ವದ್ದಾಗಿವೆ.
2013ರಲ್ಲಿ ಸಲ್ಲಿಸಲಾದ ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿಯು ಪಶ್ಚಿಮ ಘಟ್ಟಗಳ ಶೇ 37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ಪ್ರಸ್ತಾಪಿಸಿದೆ. NEP 2020 ಅನ್ನು ರಚಿಸಿದ ಕಸ್ತೂರಿರಂಗನ್ ಸಮಿತಿಯು ಶಿಕ್ಷಣ ವ್ಯವಸ್ಥೆಯಲ್ಲಿ ಪ್ರವೇಶ, ಸಮಾನತೆ, ಗುಣಮಟ್ಟ, ಕೈಗೆಟುಕುವಿಕೆ ಮತ್ತು ಹೊಣೆಗಾರಿಕೆಯ ಮೇಲೆ ಕೇಂದ್ರೀಕರಿಸಿ ಹಲವಾರು ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸಿತ್ತು.

ಡಾ.ಕೆ.ಕಸ್ತೂರಿರಂಗನ್ ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಸುದೀರ್ಘ 9ವರ್ಷಕ್ಕೂ ಅಧಿಕ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಸ್ತೂರಿ ರಂಗನ್ ಅವರು ಇಬ್ಬರು ಪುತ್ರರು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!