spot_img
Thursday, April 2, 2026
spot_img

ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗವರು ದೇಶಭಕ್ತಿ ಬಗ್ಗೆ ಮಾತಾಡುತ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ನಮ್ಮ ಕಾರ್ಯಕರ್ತರಿಗೆ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು, ವಿಶೇಷ ಉಪನ್ಯಾಸವನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್. ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ ಎಂದು ಹೇಳಿದರು.

ಗಾಂಧಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದಂತೆ, ಭಾರತದಲ್ಲಿ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಭದ್ರ ಬುನಾಧಿ ಹಾಕಿದವರು ನೆಹರೂರವರು. ಬಹುತ್ವ ಭಾರತದ ನೆಲದಲ್ಲಿ ಏಕತೆ ಮೂಡಿಸಿ ಸಹಿಷ್ಣುಣತೆಯನ್ನು ಆಚರಣೆಗೆ ತರಲು ನೆಹರೂ ಕೊಡುಗೆ ಅಪಾರ. ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತ ಸಮಾಜವನ್ನು ಜಾತಿ ಆಧಾರದಲ್ಲಿ ಒಡೆಯಿತು. ಈ ಇತಿಹಾಸ ನಿಮಗೆ ಗೊತ್ತಿರಬೇಕು ಎಂದರು.

ಯುವ ಕಾಂಗ್ರೆಸ್ ಅಂದರೆ ಭಾರತದ ಸಂವಿಧಾನ ಮತ್ತು ಬಹುತ್ವದ ರಕ್ಷಣೆಗೆ ನಿಂತ ಯುವ ಸೈನ್ಯ. ನಾವು ಏಕೆ ಕಾಂಗ್ರೆಸ್ ಕಟ್ಟುತ್ತಿದ್ದೇವೆ, ಆರ್.ಎಸ್.ಎಸ್ ಮತ್ತು ಸಂಘ ಪರಿವಾರ ಹೇಗೆ ಭಾರತದ ಬಹುತ್ವ ಮತ್ತು ಸಂವಿಧಾನ ವಿರೋಧಿ ಎನ್ನುವ ಸ್ಪಷ್ಟತೆ ನಿಮಗೆ ಇರಬೇಕು. ಈ ಸ್ಪಷ್ಟತೆ ಇಲ್ಲದವರು ಬಹಳ ವರ್ಷ ಕಾಂಗ್ರೆಸ್ ನಲ್ಲಿ ಉಳೀತಾರೆ ಎನ್ನುವುದು ಅನುಮಾನ.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಹಿಷ್ಣುತೆ ಹಾಗೂ ಸಹಬಾಳ್ವೆ ನಮ್ಮ ಸಂವಿಧಾನದ ಉಸಿರು. ಇದೇ ಭಾರತದ ಉಸಿರು ಕೂಡ ಆಗಿದೆ. “ಅಧಿಕಾರ ಬಲಾಡ್ಯರ ಕೈಯಲ್ಲಿ ಇರಬಾರದು. ಜನ ಸಾಮಾನ್ಯರ ಕೈಯಲ್ಲಿ ಇರಬೇಕು” ಎಂದು ಅಂಬೇಡ್ಕರ್ ಹೇಳಿದ್ದರು. ಕಾಂಗ್ರೆಸ್ ಜನರ ಕೈಗೆ ಅಧಿಕಾರ ಮತ್ತು ಅವಕಾಶಗಳನ್ನು ನೀಡುತ್ತಿದೆ. ಬಿಜೆಪಿ ಬಲಾಡ್ಯರಿಗೆ ಅಧಿಕಾರ ಮತ್ತು ಅವಕಾಶ ನೀಡುತ್ತಿದೆ. ಇದು ಸಂವಿಧಾನ ವಿರೋಧಿ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇನೆ. ಸ್ವಾತಂತ್ರ್ಯ ದೊರೆತದ್ದು ಸಾರ್ಥಕ ಆಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕ ಮತ್ತು ಸಾಮಾಜಿಕ ಸಬಲತೆ ಪಡೆದುಕೊಳ್ಳಬೇಕು. ಕಟ್ಟ ಕಡೆಯ ಮನುಷ್ಯನಿಗೆ ಶಕ್ತಿ ಕೊಡುವುದೇ ಸರ್ವೋದಯದ ಆಶಯ ಎಂದು ಹೇಳಿದರು.

ಮೌಡ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಕೃತಕವಾಗಿ ಸೃಷ್ಟಿಸಿ ನೀರು ಗೊಬ್ಬರ ಹಾಕಿ ಗಟ್ಟಿ ಮಾಡಿಟ್ಟಿದ್ದಾರೆ. ದೇವರು ಒಬ್ಬರಿಗೊಂದು, ಮತ್ತೊಬ್ಬರಿಗೊಂದು ಮಾಡುವುದಿಲ್ಲ. ದೇವರ ಹೆಸರಲ್ಲಿ ಮೌಢ್ಯಗಳನ್ನು ಬಿತ್ತುವವರ ಬಗ್ಗೆ ಎಚ್ಚರವಿರಲಿ. ಶರಣ ಬಸವಣ್ಣ ಹೇಳಿದ ರೀತಿಯಲ್ಲಿ ದೇವರು ಇದ್ದಾನೆ. ಬಸವಣ್ಣರ ರೀತಿಯಲ್ಲಿ ದೇವರನ್ನು ಕಾಣಬೇಕು. ಮಾಡಬಾರದ ಪಾಪಗಳನ್ನೆಲ್ಲಾ ಮಾಡಿ ದೇವರಿಗೆ ಕೈ ಮುಗಿದರೆ ಪಾಪ ಹೋಗುವುದಿಲ್ಲ. ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ. ಈ ಬಗ್ಗೆ ದೇಶದ ಜನರ ತಿಳಿವಳಿಕೆ ಹೆಚ್ಚಿಸುವ ಕೆಲಸ ಆಗಬೇಕಿದೆ ಎಂದವರು ಅಭಿಪ್ರಾಯ ಪಟ್ಟರು.

ತನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಢಾಂಗೆ ಎಂದು ಅಂಬೇಡ್ಕರ್ ಅವರೇ ಸ್ಪಷ್ಟವಾಗಿ ಬರೆದಿದ್ದಾರೆ. ನಿಮಗೆ ಇಂಥಾ ವಿಷಯಗಳಲ್ಲಿ ಸ್ಪಷ್ಟತೆ ಮತ್ತು ಬದ್ಧತೆ ಇದ್ದರೆ ಯಾರು ಏನೇ ಮಾಡಿದರೂ ನೀವು ಬದಲಾಗಲ್ಲ. ರಾಜೀವ್ ಗಾಂಧಿ ಅವರು ಕೊಟ್ಟ ಮೀಸಲಾತಿಯನ್ನು ವಿರೋಧಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದು ಬಿಜೆಪಿಯ ರಾಮಾ ಜೋಯಿಸ್. ಆದರೆ ನ್ಯಾಯಾಲಯ ರಾಜೀವ್ ಗಾಂಧಿ ಅವರು ತಂದ ತಿದ್ದುಪಡಿಯನ್ನು ಎತ್ತಿ ಹಿಡಿದು, ಇದು ಸಂವಿಧಾನ ಬದ್ಧವಾಗಿದೆ ಎಂದು ಹೇಳಿತು. ಮೀಸಲಾತಿಯನ್ನು ವಿರೋಧಿಸಿದ್ದ ಬಿಜೆಪಿ ಮಂಡಲ್ ವರದಿಯನ್ನೂ ವಿರೋಧಿಸಿತು. ಹೀಗಾಗಿ ಇತಿಹಾಸ ಮತ್ತು ಸಿದ್ಧಾಂತದ ಬಗ್ಗೆ ನಿಮಗೆ ಸ್ಪಷ್ಟತೆ ಇದ್ದರೆ ಮುಂದೆ ಉತ್ತಮ‌ ನಾಯಕರಾಗಿ ಬೆಳೆಯುತ್ತೀರಿ. ಯುವ ಕಾಂಗ್ರೆಸ್ ಇಂದು ಇಲ್ಲಿ ಆಯೋಜಿಸಿರುವ ಇಂತಹ ಕಾರ್ಯಾಗಾರಗಳು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಡೆಯಬೇಕು ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!