spot_img
Thursday, April 2, 2026
spot_img

ಹೇನಬೇರು: ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

ಬೈಂದೂರು: ಬೆನ್ನು ಮೂಳೆ ಮುರಿತಕ್ಕೊಳಗಾಗಿ ಮಲಗಿದ್ದಲ್ಲೇ ಮಲಗಿರುವವರ ಶೋಚನೀಯ ಪರಿಸ್ಥಿತಿ ಯಾರಿಗೂ ಬರಬಾರದು. ಜೀವ ಉಳಿಸಿಕೊಂಡರೂ ಜೀವನ ಕಳೆದುಕೊಂಡವರ ನೆರವಿಗೆ ನಿಲ್ಲಬೇಕಾಗಿರುವುದು ನಮ್ಮ ಕರ್ತವ್ಯ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕರೆ ನೀಡಿದರು.

ಅವರು ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಸೇವಾ ಸೇತು ಯೋಜನೆ ಮೂಲಕ ಸೇವಾ ಭಾರತಿ ಕನ್ಯಾಡಿ ಇವರ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪಡುವರಿ ಗ್ರಾಮದ ಹೇನಬೇರುವಿನಲ್ಲಿ ನಿರ್ಮಿಸಲು ಉದ್ಧೇಶಿಸಿರುವ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಾ ಬೆನ್ನುಹುರಿ ಮುರಿತಕ್ಕೊಳಗಾದವರ ಸೇವೆ ಮಾಡುತ್ತಿರುವ ಧರ್ಮಸ್ಥಳ ಕನ್ಯಾಡಿಯ ಸೇವಾಭಾರತಿ ಸಂಸ್ಥೆಯ ಪ್ರಮುಖರಾದ ವಿನಾಯಕ್ ರಾವ್ ಅವರ ಸೇವೆಯನ್ನು ಕೊಂಡಾಡಿದರು.

ಈ ಹಿಂದೆ ಹೊಸಂಗಡಿಯ ಕೆಪಿಸಿಯಲ್ಲಿ ಪಾಳುಬಿದ್ದ ಕಟ್ಟಡದಲ್ಲಿ ಬೆನ್ನುಹುರಿ ಮುರಿತಕ್ಕೊಳಗಾದವರ ಆರೈಕೆಗೆ ಕೇಂದ್ರ ಆರಂಭಿಸಲು ಹೊರಟಾಗ ಅನೇಕ ಅಡೆತಡೆಗಳು ಎದುರಾದವು. ಈ ಹಿನ್ನೆಲೆಯಲ್ಲಿ ಮುಚ್ಚಿರುವ ಶಾಲೆಗಳನ್ನು ಆಯ್ದುಕೊಳ್ಳುವ ಹಾದಿ ಹಿಡಿದೆವು ಎಂದು ಸೇವಾಧಾಮ ನಿರ್ಮಾಣದ ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು. ಇನ್ನು ಯಾವುದೇ ಅಡೆತಡೆಯಿಲ್ಲದೆ ಸೇವಾಧಾಮ ಎದ್ದು ನಿಲ್ಲಲಿದೆ ಎಂಬ ಭರವಸೆಯನ್ನೂ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!